ಪಾವಗಡ
ತಾಲ್ಲೂಕಿನ ಗುಜ್ಜನಡು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೊಣದಕುರಿಕೆ ಗ್ರಾಮದಲ್ಲಿ ಗ್ರಾಮವಿಕಾಸ ಯೋಜನೆಯಡಿ ನಡೆದಿರುವ ಕಾಮಗಾರಿಗಳು ಕಳಪೆಯಿಂದ ಕೂಡಿವೆ ಎಂದು ಮಂಗಳವಾರ ಚಿತ್ರದುರ್ಗ ಜಿ.ಪಂನ ಡಿಎಸ್2 ಬಸವರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತಿಳಿಸಿದರು.
ತಾಲ್ಲೂಕಿನ ಗುಜ್ಜನಡು ಗ್ರಾಮ ಪಂಚಾಯ್ತಿಯ ಕೊಣದಕುರಿಕೆ ಗ್ರಾಮವು ಗ್ರಾಮ ವಿಕಾಸ ಯೋಜನೆಗೆ ಆಯ್ಕೆಯಾಗಿದ್ದು, ಸುಮಾರು 75 ಲಕ್ಷ ರೂ. ವೆಚ್ಚದಲ್ಲಿ ಇಲ್ಲಿ ಕೈಗೊಂಡಿರುವ ವಿವಿಧ ಕಾಮಗಾರಿಗಳು ಕಳಪೆಯಿಂದ ಕೂಡಿವೆ. ಅಲ್ಲದೆ ಕಾಮಗಾರಿಯನ್ನು ಪೂರ್ಣಗೊಳಿಸದೆ ಹಣವನ್ನು ಡ್ರಾ ಮಾಡಲಾಗಿದೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಚಿತ್ರದುರ್ಗದ ಉಪಕಾರ್ಯದರ್ಶಿಗಳಾದ ಬಸವರಾಜುರವರು ಭೇಟಿ ಪರಿಶೀಲನೆ ನಡೆಸಿದರು.
ಇದೇ ವೇಳೆ ಅವರು ಮಾತನಾಡಿ, ಗ್ರಾಮ ವಿಕಾಸ ಯೋಜನೆಯಲ್ಲಿ ಮಂಜೂರಾದ ಅನುದಾನದಲ್ಲಿ ಇಲ್ಲಿ ಕೈಗೊಂಡ ಅಭಿವೃದ್ದಿ ಕಾಮಗಾರಿಗಳು ಮತ್ತು ಗುಣಮಟ್ಟದ ಬಗ್ಗೆ ಹಾಗೂ ಖರ್ಚು ಮಾಡಿದ ಅನುದಾನದ ಬಗ್ಗೆ ಗ್ರಾ.ಪಂನಿಂದ ಪೂರ್ಣ ಮಾಹಿತಿ ಪಡೆದಿದ್ದು, ಸರ್ಕಾರಕ್ಕೆ ವರದಿ ನೀಡಲಾಗುವುದೆಂದು ತಿಳಿಸಿದರು.ಪಿಡಿಓ ಚಿಕ್ಕಣ್ಣ, ಗ್ರಾಮ ಪಂಚಾಯ್ತಿಯ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
