ಚಿತ್ರದುರ್ಗ;
ಕೋಟೆನಗರಿ ಚಿತ್ರದುರ್ಗದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರು ಶನಿವಾರದಂದು ಕಾಂಗ್ರೆಸ್ –ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರ ಪರ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಲಿದ್ದಾರೆ.
ಇಲ್ಲಿನ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿರುವ ಈ ಬೃಹತ್ ರ್ಯಾಲಿಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಸುಮಾರು ಒಂದು ಲಕ್ಷ ಮಂದಿ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಮಾಜಿ ಸಚಿವ ಹೆಚ್.ಅಂಜನೇಯ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು
ರ್ಯಾಲಿಯನ್ನು ಯಶಸ್ವಿಗೊಳಿಸಲು ಎಲ್ಲಾ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. ಬೃಹತ್ ವೇದಿಕೆ ಮತ್ತು ಪೆಂಡಾಲ್‍ನ್ನು ಹೈಟೆಕ್ ಮಾದರಿಯಲ್ಲಿ ನಿರ್ಮಿಸಲಾಗಿದೆ. 30 ಸಾವಿರ ಮಂದಿ ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡಲಾಗಿದೆ. ಮದ್ಯಾಹ್ನ 2-30ಕ್ಕೆ ರಾಹುಲ್‍ಗಾಂಧಿ ಅವರು ಚಿತ್ರದುರ್ಗಕ್ಕೆ ಆಗಮಿಸುವರು ಎಂದು ಹೇಳಿದರು
ರ್ಯಾಲಿಯಲ್ಲಿ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವರಾದ ಡಿ.ಕೆ.ಶಿವಕುಮಾರ್,ಸತೀಶ್ ಜಾರಕಿಹೊಳಿ, ಪ್ರಚಾರ ಸಮಿತಿ ಅಧ್ಯಕ್ಷ ಹೆಚ್.ಕೆ.ಪಾಟೀಲ್, ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹಿಂ, ಮಾಜಿ ಸಚಿವ ಜಯಚಂದ್ರ , ಜಿಲ್ಲೆಯ ಪಕ್ಷದ ನಾಯಕರು ಪಾಲ್ಗೊಳ್ಳಲಿದ್ದಾರೆ
ಬಿಜೆಪಿಗೆ ಬದ್ದತೆ ಇಲ್ಲ
ಬಿಜೆಪಿಗರಿಗೆ ನೀರಾವರಿ ಬಗ್ಗೆ ಬದ್ದತೆ ಇದ್ದಿದ್ದರೆ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವಂತೆ ಪ್ರಧಾನಿ ಮೇಲೆ ಒತ್ತಡ ತರಬೇಕಾಗಿತ್ತು ಎಂದು ಹೆಚ್.ಆಂಜನೇಯ ಹೇಳಿದರು.
ತಾಂತ್ರಿಕ ಕೊರತೆಯಿಂದಾಗಿ ವಿಳಂಬವಾಗಿಲ್ಲ. ಭದ್ರಾ ಮೇಲ್ದಂಡೆ ಕಾಂಗ್ರೆಸಿನ ಕೂಸು ,ಬಿಜೆಪಿ ನಮ್ಮ ಕೂಸಿಗೆ ನಾವು ತಂದೆ ಎಂದು ಹೇಳುತ್ತಾರೆಂದು ಆಕ್ರೋಶ ವ್ಯಕ್ತಪಡಿದ ಅವರು, ನುಡಿದಂತೆ ನಡೆಯೋರು ನಾವು ಬಿಜೆಪಿಯವರು ಸುಳ್ಳಿನ ಸರದಾರರು ನಾವು ಅಧಿಕಾರಕ್ಕೆ ಬಂದ ಮೇಲೆ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುತ್ತೆವೆ ಎಂದು ಹೇಳಿದರು.
ಸಿಎಂ ಆಗಿದ್ದ ವೇಳೆಯಲ್ಲಿ ಸಿದ್ದರಾಮಯ್ಯ ರೈತರ ಸಾಲಮನ್ನಾ ಮಾಡಿದರು. ಸಿಎಂ ಕುಮಾರಸ್ವಾಮಿ ಕೂಡ ಸಾಲಮನ್ನಾ ಮಾಡಿದ್ದಾರೆ. ಮೋದಿ ಯಾವುದೇ ರೈತರ ಸಾಲಮನ್ನಾ ಮಾಡಲಿಲ್ಲ ಉದ್ಯೋಗವನ್ನು ಸೃಷ್ಠಿಸಲಿಲ್ಲ. ರಾಜ್ಯದಲ್ಲಿ ಸಾಲಮನ್ನಾ ಮಾಡಿರುವುದಲ್ಲದೆ ಸರ್ಕಾರದ ಸೌಲಭ್ಯಗಳು ನೇರವಾಗಿ ರೈತರಿಗೆ ತಲುಪುವಂತೆ ಮಾಡಲಾಗಿದೆ ಎಂದು ತಿಳಿಸಿದರು.
ಶಾಸಕ ಹಾಗೂ ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿ ಮಾತನಾಡಿ, ಭದ್ರಾಮೇಲ್ದಂಡೆ ಯೋಜನೆಗೆ ಬಜೆಟ್‍ನಲ್ಲಿ ಪ್ರತ್ಯೇಕ ಹಣ ಬಿಡುಗಡೆ ಮಾಡಿಲ್ಲ. ನೀರಾವರಿ ನಿಗಮಕ್ಕೆ ವರ್ಷಕ್ಕೆ 10 ಸಾವಿರ ಕೋಟಿ ಬಿಡುಗಡೆ ಮಾಡಿದೆ. ಹಣ ಖರ್ಚಾದಂತೆ ಮತ್ತಷ್ಟು ಹಣ ಬಿಡುಗಡೆಯಾಗಲಿದೆ. ಇಂತಿಷ್ಟು ಹಣ ಖರ್ಚು ಮಾಡಬೇಕೆಂಬ ಮೀತಿ ಇಲ್ಲ ಎಂದು ಹೇಳಿದರು.
ಬಿಜೆಪಿ ಸರ್ಕಾರವಿದ್ದಾಗ ಕೇವಲ 300 ಕೋಟಿ ಮಾತ್ರ ಖರ್ಚು ಮಾಡಲಾಗಿತ್ತು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 2500 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಹಣ ಖರ್ಚು ಮಾಡಲು ಯಾವುದೇ ನಿರ್ಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.
ಕೆಪಿಸಿಸಿ ಕಾರ್ಯದರ್ಶಿ ಹನುಮಲಿ ಷಣ್ಮುಖಪ್ಪ, ಹಿರಿಯ ನಾಯಕ ಆರ್.ವಿ.ವೆಂಕಟೇಶ್, ಜಿ.ಎಸ್.ಮಂಜುನಾಥ್, ಸಂಸದ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ, , ಜೆಡಿಎಸ್ ರಾಜ್ಯ ಕಾರ್ಯದರ್ಶಿ ಬಿ.ಕಾಂತರಾಜ್, ಜಿಲ್ಲಾ ಅಧ್ಯಕ್ಷ ಡಿ.ಯಶೋಧರ, ಮುಖಂಡರಾದ ಶೇಷಣ್ಣಕುಮಾರ್, ವೀರಣ್ಣ, ನರಸಿಂಹರಾಜ್ ಡಿ.ಎನ್.ಮೈಲಾರಪ್ಪ, ಮಹಡಿ ಶಿವಮೂರ್ತಿ, ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ, ತಿಮ್ಮಣ್ಣ ಇನ್ನಿತರರು ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದರು.