ಬೆಂಗಳೂರು
ಮೈಸೂರಿನ ಕೆಆರ್ ಆಸ್ಪತ್ರೆಗೆ ವೆಚಿಟಿಲೇಟರ್ ಸೇರಿದಂತೆ ಅಗತ್ಯ ಮೂಲಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ಹೇಳಿದ್ದಾರೆ.
ಮೈಸೂರಿನಲ್ಲಿಂದು ಕೆ.ಆರ್.ಆಸ್ಪತ್ರೆಗೆ ಭೇಟಿ ನೀಡಿ ವಿಷ ಪ್ರಸಾದ ಸೇವನೆಯಿಂದಾಗಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಯೋಗಕ್ಷೇಮ ವಿಚಾರಿಸಿದ ನಚಿತರ ಸುದ್ದಿಗಾರರಿಗೆ ಅವರು ಈ ವಿಷಯ ತಿಳಿಸಿದರು. ವೆಂಟಿಲೇಟರ್ ಪೂರೈಕೆ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ. ಶಿವಕುಮಾರ್‍ರೊಂದಿಗೆ ಈಗಾಗಲೇ ಮಾತುಕತೆ ನಡೆಸಲಾಗಿದೆ. ಅಧಿವೇಶನ ಮುಗಿದ ಬಳಿಕ ಸಮಸ್ಯೆ ಬಗೆಹರಿಸುವುದಾಗಿ ಸಚಿವರು ಭರವಸೆ ಕೊಟ್ಟಿದ್ದಾರೆ ಎಂದ ಸಚಿವ ಜಿ.ಟಿ. ದೇವೇಗೌಡ ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ