ಬೆಂಗಳೂರು
ಬಸವಾದಿ ಶಿವಶರಣರ ತತ್ವಗಳನ್ನು ಪ್ರಚಾರ ಮಾಡುವಲ್ಲಿ ಗದಗದ ತೋಂಟದಾರ್ಯ ಮಠದ ಡಾ. ಸಿದ್ದಲಿಂಗ ಸ್ವಾಮೀಜಿ ಅವರ ಪಾತ್ರ ಅವಿಸ್ಮರಣೀಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಗದಗದ ತೋಂಟದಾರ್ಯ ಮಠದಲ್ಲಿ ಇಂದು ಏರ್ಪಡಿಸಿದ್ದ, ಲಿಂಗೈಕ್ಯ ಡಾ. ಸಿದ್ದಲಿಂಗಸ್ವಾಮೀಜಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಈ ವಿಷಯ ತಿಳಿಸಿದರು.
ತಾರತಮ್ಯ ಇಲ್ಲದ ಸಮಾಜ ನಿರ್ಮಾಣ ಮಾಡುವ ಮೂಲ ತತ್ವ, ಆಶಯ ಬಸವ ಧರ್ಮದಲ್ಲಿದೆ. ಸ್ವಾಮಿಜಿ ತಮ್ಮ ಜೀವನದಲ್ಲಿ ಅದನ್ನು ಅಳವಡಿಸಿಕೊಂಡು ಇತರರಿಗೆ ಆದರ್ಶಪ್ರಾಯರಾಗಿದ್ದರು ಎಂದರು.
ಇದೇ ಸಂದರ್ಭದಲ್ಲಿ ಡಾ. ಸಿದ್ದಲಿಂಗಸ್ವಾಮೀಜಿ ಕುರಿತ “ಕ್ರಾಂತಿ ಕಾರುಣ್ಯ” ಗ್ರಂಥವನ್ನು ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಸಚಿವ ಹೆಚ್.ಕೆ. ಪಾಟೀಲ್, ಚಿತ್ರದುರ್ಗ ಬ್ರಹನ್ಮಠದ ಡಾ. ಶಿವಮೂರ್ತಿ ಮುರುಘರಾಜೇಂದ್ರ ಶರಣರು ಕಾರ್ಯಕ್ರಮದಲ್ಲಿ ಹಾಜರಿದ್ದರು.