ಹೊನ್ನಾಳಿ:
ಟಿ. ಗೋಪಗೊಂಡನಹಳ್ಳಿ ಗಡಿ ಭಾಗದ ಚೆಕ್‍ಪೋಸ್ಟ್‍ನಲ್ಲಿ ಶುಕ್ರವಾರ ಚೆಕ್‍ಪೋಸ್ಟ್ ಅಧಿಕಾರಿಗಳು ಕೆಎಸ್‍ಆರ್‍ಟಿಸಿ ಬಸ್‍ಗಳನ್ನು ತಪಾಸಣೆ ನಡೆಸಿದರು.ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಎಲ್ಲಾ ರೀತಿಯ ಕ್ರಮಗಳನ್ನು ಚುನಾವಣಾಧಿಕಾರಿಗಳು ಕೈಗೊಳ್ಳುತ್ತಿದ್ದಾರೆ.
ಏ.23ರಂದು ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆಯಲಿದ್ದು, ಚುನಾವಣಾ ದಿನಾಂಕ ಸಮೀಪಿಸುತ್ತಿದ್ದಂತೆ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳ ವಿವಿಧ ಚೆಕ್‍ಪೋಸ್ಟ್‍ಗಳಲ್ಲಿ ತಪಾಸಣಾ ಕಾರ್ಯ ತೀವ್ರ ಚುರುಕುಗೊಂಡಿದೆ.
ತಾಲೂಕಿನ ಟಿ. ಗೋಪಗೊಂಡನಹಳ್ಳಿ ಬಳಿಯ ಚೆಕ್‍ಪೋಸ್ಟ್‍ನಲ್ಲಿ ಶುಕ್ರವಾರ ತಪಾಸಣಾ ಕೇಂದ್ರದ ಸಿಬ್ಬಂದಿ ರಂಗನಾಥ್ ಪೊಲೀಸರೊಂದಿಗೆ ವಾಹನಗಳನ್ನು ಪರಿಶೀಲಿಸಿದರು.
ಚೆಕ್‍ಪೋಸ್ಟ್ ಪರಿಶೀಲನೆ, ವಾಹನಗಳ ತಪಾಸಣೆ, ಅದರಲ್ಲಿನ ವಸ್ತುಗಳು ಹಾಗೂ ಅವುಗಳಿಗೆ ಸಂಬಂಧಿಸಿದ ವೋಚರ್‍ಗಳು, ಬಿಲ್‍ಗಳ ಪರಿಶೀಲನೆ ನಡೆಸಿದರು.ಚುನಾವಣಾ ಅಕ್ರಮಗಳನ್ನು ತಡೆಯುವುದು ಚೆಕ್‍ಪೋಸ್ಟ್‍ಗಳ ಮೂಲ ಉದ್ದೇಶ. ಆದ್ದರಿಂದ, ಚೆಕ್‍ಪೋಸ್ಟ್‍ಗಳ ಮೂಲಕ ಹಾದುಹೋಗುವ ಎಲ್ಲಾ ವಾಹನಗಳನ್ನೂ ಪರಿಶೀಲಿಸಲಾಗುತ್ತಿದೆ. ಪ್ರತಿ ದಿನ ಸುಮಾರು ಒಂದೂವರೆ ಸಾವಿರಕ್ಕೂ ಅಧಿಕ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
