ಬೆಂಗಳೂರು
ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ. ವಿಮಾನ ನಿಲ್ದಾಣದಿಂದ ಸಂಚಾರ ನಡೆಸುವ ಫ್ಲೈ ಬಸ್ ಸೇವೆಯ ದರವನ್ನು ಇಳಿಕೆ ಮಾಡಿ ಆದೇಶ ಹೊರಡಿಸಿದೆ.ಜನವರಿ 20 ರಿಂದ ಜಾರಿಗೆ ಬರುವಂತೆ ಪ್ರಯಾಣ ದರವನ್ನು ಕಡಿತಗೊಳಿಸಲಾಗಿದೆ ಎಂದು ಕೆಎಸ್ಆರ್ಪ್ರಕಟಣೆಯಲ್ಲಿ ತಿಳಿಸಿದೆ. ಮೊದಲು 800 ರೂ. ಇದ್ದ ಪ್ರಯಾಣದರವನ್ನು 750 ರೂ.ಗಳಿಗೆ ಕಡಿತಗೊಳಿಸಲಾಗಿದೆ.
ಕೆಎಸ್ಆರ್‌ಟಿಸಿ ಬೆಂಗಳೂರು ಕೇಂದ್ರಿಯ ವಿಭಾಗದಿಂದ ಸಂಚಾರ ನಡೆಸುವ ಫ್ಲೈ ಬಸ್ ಸೇವೆಗಳ ದರಗಳನ್ನು ಕಡಿತಗೊಳಿಸಲಾಗಿದೆ. ಫ್ಲೈ ಬಸ್‌ಗಳು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ಸಂಚಾರ ನಡೆಸುತ್ತವೆ.ಲೋಡ್ ಫ್ಯಾಕ್ಟರ್ ಉತ್ತಮಗೊಳಿಸಲು ಜನವರಿ 20ರಿಂದ ಜಾರಿಗೆ ಬರುವಂತೆ ಪ್ರಯಾಣದವರನ್ನು ಕಡಿತಗೊಳಿಸಲಾಗಿದೆ ಎಂದು ಕೆಎಸ್ಆರ್‌ಟಿಸಿ ಹೇಳಿದೆ. ಎರಡು ಫ್ಲೈ ಬಸ್‌ಗಳು ಬೆಂಗಳೂರು-ಮೈಸೂರು ನಡುವೆ ಸಂಚಾರ ನಡೆಸುತ್ತಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ