ಬೆಂಗಳೂರು
ತುಮಕೂರಿನ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರು ಲಿಂಗೈಕ್ಯದ ಹಿನ್ನೆಲೆಯಲ್ಲಿ ಭಕ್ತಾದಿಗಳಿಗೆ ಅವರ ಅಂತಿಮ ದರ್ಶನದ ಅವಕಾಶ ಕಲ್ಪಿಸಲು ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ ಟಿಸಿ) ತುಮಕೂರಿಗೆ ಹೆಚ್ಚುವರಿ ಬಸ್ ಸೇವೆ ಒದಗಿಸಿದೆ.
ತುಮಕೂರಿನ ಎಪಿಎಂಸಿ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಹಾಗೂ ಜ್ಯೂನಿಯರ್ ಕಾಲೇಜುಗಳಿಂದ ಸಿದ್ಧಗಂಗಾ ಮಠಕ್ಕೆ 100ಕ್ಕೂ ಅಧಿಕ ಬಸ್ಗಳನ್ನು ಆರಂಭಿಸಲಾಗಿದೆ. ನಿಗಮದ ವ್ಯಾಪ್ತಿಯ ವಿವಿಧ ಜಿಲ್ಲೆಗಳಿಂದ ತುಮಕೂರಿಗೆ ತೆರಳುವ ಭಕ್ತಾದಿಗಳ ಅನುಕೂಲಕ್ಕಾಗಿ ಇಂದು ಮತ್ತು ನಾಳೆ ಹೆಚ್ಚುವರಿ ಬಸ್ಗಳು ಸಂಚರಿಸಲಿವೆ ಎಂದು ಕೆಎಸ್ಆರ್ ಟಿಸಿಯ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ