ವಿಶ್ವಾಸ ಮತದಲ್ಲಿ ಸಿಎಂಗೆ ಸೋಲು..!!

ಮೈತ್ರಿಕೂಟಕ್ಕೆ 99, ಬಿಜೆಪಿಗೆ 105 ಮತಗಳು

ಬೆಂಗಳೂರು

    ಮುಖ್ಯಮಂತ್ರಿ ಎಚ್ ಡಿ ಕುಮಾರ ಸ್ವಾಮಿ ನೇತೃತ್ವದ ಜೆಡಿಎಸ್ – ಕಾಂಗ್ರೆಸ್ ಮೈತ್ರಿ ಸರ್ಕಾರ ವಿಶ್ವಾಸಮತ ಕಳೆದುಕೊಂಡಿದ್ದು, ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ,ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ರಚನೆಗೆ ಇದೀಗ ಹಾದಿ ಸುಗಮವಾಗಿದೆ

    ವಿಶ್ವಾಸಮತ ನಿರ್ಣಯದ ಪರವಾಗಿ 99 ಮತಗಳು, ವಿರುದ್ಧವಾಗಿ 105 ಮತಗಳು ದೊರೆಯಿತು. ಸದನದಲ್ಲಿ ಸ್ಪೀಕರ್ ಹೊರತುಪಡಿಸಿ ಒಟ್ಟು 204 ಮಂದಿ ಸದಸ್ಯರು ಹಾಜರಿದ್ದರು. ಈ ಮೂಲಕ ಕಳೆದ ಮೂರು ವಾರಗಳಿಂದ ನಡೆಯುತ್ತಿದ್ದ ಶಾಸಕರ ರಾಜೀನಾಮೆ, ಆಪರೇಷನ್ ಕಮಲ ಕಾರ್ಯಾಚರಣೆ, ರಾಜಕೀಯ ಅನಿಶ್ಚಿತತೆಗೆ ತೆರೆ ಬಿತ್ತು. ಕುಮಾರ ಸ್ವಾಮಿ ನೇತೃತ್ವದ 14 ತಿಂಗಳ ಮೈತ್ರಿ ಸರ್ಕಾರ ಪತನಗೊಂಡಿದೆ.

      ವಿಧಾನಸಭೆಯಲ್ಲಿ ಕಳೆದ ಗುರುವಾರ ಕುಮಾರ ಸ್ವಾಮಿ ಮಂಡಿಸಿದ್ದ ವಿಶ್ವಾಸಮತ ನಿರ್ಣಯದ ಮೇಲೆ ನಾಲ್ಕು ದಿನಗಳ ಕಾಲ ನಡೆದ ಸುದೀರ್ಘ ಚರ್ಚೆಗೆ ಉತ್ತರ ನೀಡಿದ ಕುಮಾರ ಸ್ವಾಮಿ, ಬಳಿಕ ವಿಶ್ವಾಸ ನಿರ್ಣಯವನ್ನು ಮತಕ್ಕೆ ಹಾಕುವಂತೆ ಕೋರಿದರು. ಧ್ವನಿಮತದ ನಂತರ ಪ್ರತಿಪಕ್ಷ ನಾಯಕ ಯಡಿಯೂರಪ್ಪ ಮತ ವಿಭಜನೆಗೆ ಒತ್ತಾಯಿಸಿದರು. ಬಳಿಕ ಕೋರಂ ಬೆಲ್ ಹೊಡೆದ ನಂತರ ಪರ ವಿರುದ್ಧ ಶಾಸಕರ ತಲೆ ಎಣಿಕೆ ನಡೆಯಿತು.

       ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಮಲಿಂಗಾ ರೆಡ್ಡಿ, ಕಾಂಗ್ರೆಸ್ ನಾಯಕರ ವಿರುದ್ಧ ಮುನಿಸಿಕೊಂಡಿದ್ದ ಅವರ ಪುತ್ರಿ ಸೌಮ್ಯ ರೆಡ್ಡಿ, ಉಪ ಸಭಾಧ್ಯಕ್ಷ ಎಂ. ಕೃಷ್ಣಾ ರೆಡ್ಡಿ ಸಹ ಮೈತ್ರಿ ಸರ್ಕಾರದ ಪರವಾಗಿ ಮತ ಚಲಾಯಿಸಿದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap