ಹನುಮ ಜಯಂತ್ಯುತ್ಸವ ಸಮಾರಂಭ

ಹೊನ್ನಾಳಿ:

      ತಾಲೂಕಿನ ಕುಂದೂರು ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರ ಹನುಮ ಜಯಂತ್ಯುತ್ಸವ ಸಮಾರಂಭವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಹನುಮ ಜಯಂತ್ಯುತ್ಸವದ ಹಿನ್ನೆಲೆಯಲ್ಲಿ ವಿಶೇಷ ಪೂಜೆ ಮತ್ತಿತರ ಧಾರ್ಮಿಕ ವಿಧಿಗಳ ಆಚರಣೆಗೆ ಗುರುವಾರದಿಂದಲೇ ಸಕಲ ಸಿದ್ಧತೆಗಳು ನಡೆದಿದ್ದವು.

       ಶ್ರೀ ಆಂಜನೇಯ ಸ್ವಾಮಿ ವಿಗ್ರಹಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಶ್ರೀ ಆಂಜನೇಯ ಸ್ವಾಮಿ ವಿಗ್ರಹವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಬಳಿಕ ಆಗಮಿಸಿದ ಎಲ್ಲಾ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.ಕುಂದೂರು, ಕೂಲಂಬಿ, ಕುಂಬಳೂರು, ನೆಲಹೊನ್ನೆ, ಹನುಮನಹಳ್ಳಿ, ತಿಮ್ಲಾಪುರ, ಯಕ್ಕನಹಳ್ಳಿ, ಯರೇಚಿಕ್ಕನಹಳ್ಳಿ, ಬನ್ನಿಕೋಡು ಮತ್ತಿತರ ಗ್ರಾಮಗಳಿಂದ ಹಾಗೂ ತಾಲೂಕಿನ ವಿವಿಧ ಗ್ರಾಮಗಳಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ಆಂಜನೇಯ ಸ್ವಾಮಿ ದರ್ಶನ ಪಡೆದರು.

ಹನುಮನ ವಿಗ್ರಹ ಕೊಡುಗೆ:

      ಕುಂದೂರಿನ ಧನಂಜಯ, ವಿನಾಯಕ ಬಳಗ ಮತ್ತು ಗ್ರಾಮಸ್ಥರು ಚಿತ್ತಾಕರ್ಷಕ ಹನುಮನ ವಿಗ್ರಹವನ್ನು ಕುಂದೂರು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಕೊಡುಗೆಯಾಗಿ ನೀಡಿದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಹನುಮನ ವಿಗ್ರಹವನ್ನು ಮೆರವಣಿಗೆ ಮಾಡಲಾಯಿತು. ಮಾಜಿ ಪ್ರಧಾನ ಸಿ.ಕೆ. ಶೇಖರಪ್ಪ, ಷಣ್ಮುಖ, ಅನಿಲ್, ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಸೇವಾ ಸಮಿತಿಯ ಪದಾಧಿಕಾರಿಗಳು, ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link