ಪೊಲೀಸ್ ಆಯುಕ್ತರಿಗೆ ಸನ್ಮಾನ ಮಾಡಿದ ಲೇಡಿ ಡಾನ್..!

ಬೆಂಗಳೂರು

     ಮೀಟರ್ ಬಡ್ಡಿ ದಂಧೆ ಸೇರಿದಂತೆ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ರೌಡಿ ಯಶಸ್ವಿನಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್‌ಗೆ ಸನ್ಮಾನ ಮಾಡಿರುವುದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

    ಸಾಮಾಜಿಕ ಕಾರ್ಯಕರ್ತೆ ನೆಪ ಮಾಡಿಕೊಂಡು ರೌಡಿ ಯಶಸ್ವಿನಿ ಶ್ರೀರಾಮಸೇನೆಯ ಮುತಾಲಿಕ್ ಜೊತೆ ನಿಂತು ಭಾಸ್ಕರ್ ರಾವ್ ಅವರಿಗೆ ಶಾಲು ಹೊದಿಸಿ, ಗಂಧದ ಹಾರ ಹಾಕಿ ಸನ್ಮಾನಿಸಿರುವ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.ಯಶಸ್ವಿನಿ ಮತ್ತು ಈಕೆಯ ಪತಿ ರೌಡಿ ದಡಿಯಾ ಮಹೇಶ್ ಅವರ ಸನ್ಮಾನವನ್ನು ನಗುಮೊಗದಿಂದಲೇ ಭಾಸ್ಕರ್ ರಾವ್ ಸ್ವೀಕರಿಸಿದ್ದಾರೆ.ಯಶಸ್ವಿನಿ ಈಗ ಕಮಿಷನರ್‌ಗೆ ಸನ್ಮಾನ ಮಾಡಿದ ಫೊಟೊಗಳು ವೈರಲ್ ಆಗಿದ್ದು ರೌಡಿಗಳಿಂದ ಸನ್ಮಾನ ಮಾಡಿಸಿಕೊಂಡ ಕಮಿಷನರ್ ಭಾಸ್ಕರ್ ರಾವ್ ನಡೆ ಆಕ್ರೋಶ ವ್ಯಕ್ತವಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ  

Recent Articles

spot_img

Related Stories

Share via
Copy link