ಬೆಂಗಳೂರು
ನಗರದ ಎಲ್ಲಾ 210 ಕೆರೆಗಳ ಅಭಿವೃದ್ಧಿ ಹಾಗೂ ಮೇಲ್ವಿಚಾರಣೆಯನ್ನು ಬಿಬಿಎಂಪಿಗೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ .ನಗರದ ಕೆರೆಗಳ 600 ಎಕರೆಯಷ್ಟು ಜಾಗ ಒತ್ತುವರಿಯಾಗಿದೆ. ಅದನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಸದ್ಯ 32 ಕೆರೆಗಳು ಬಿಡಿಎ ವ್ಯಾಪ್ತಿಯಲ್ಲಿವೆ. ಈ ಪೈಕಿ ಬೆಳ್ಳಂದೂರು, ವರ್ತೂರು ಹಾಗೂ ಹೊಸಕೆರೆಹಳ್ಳಿ ಕೆರೆಗಳನ್ನು ಬಿಟ್ಟು ಉಳಿದ 29 ಕೆರೆಗಳ ಸರ್ವೆ ಕಾರ್ಯ ಪೂರ್ಣಗೊಂಡಿದೆ. ಬೆಳ್ಳಂದೂರು ಹಾಗೂ ವರ್ತೂರು ಕೆರೆಗಳ ಒತ್ತುವರಿ ತೆರವು ಕಾರ್ಯ ಮುಗಿದಿದೆ. ಈ ಕೆರೆಗಳ ಅಭಿವೃದ್ಧಿ ಕಾರ್ಯ ಆರಂಭವಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
ಉಳಿದ ಕೆರೆಗಳನ್ನು ಬಿಬಿಎಂಪಿಗೆ ಪ್ರಾಧಿಕಾರ ಹಸ್ತಾಂತರಿಸಲಾಗುವುದು. ಒತ್ತುವರಿ ಮಾಡಿಕೊಂಡಿರುವ ಬಡವರಿಗೆ ಪುನರ್‌ವಸತಿ ಕಲ್ಪಿಸಲಾಗುವುದು. ಜತೆಗೆ, ರಾಜಕಾಲುವೆಗಳ ಒತ್ತುವರಿಯನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲು ಸರ್ಕಾರ ನಿರ್ಧರಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ