ಬೆಂಗಳೂರು 
ಫ್ಲೈವುಡ್ ಗೋದಾಮಿಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಹೋಗಿರುವ ದುರ್ಘಟನೆ ಕೆಂಪೇಗೌಡ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ
ಕೆಂಪೇಗೌಡ ನಗರದ ಗವಿಪುರಂ ಗುಟ್ಟಹಳ್ಳಿ ಮುಖ್ಯರಸ್ತೆಯ ಫ್ಲೈವುಡ್ ಗೋದಾಮಿಗೆ ಬೆಳಿಗ್ಗೆ 8ರ ವೇಳೆ ವಿದ್ಯುತ್ ಶಾರ್ಟ್ ಸಕ್ರ್ಯೂಟ್ನಿಂದ ತಗುಲಿರುವ ಬೆಂಕಿಯು ಸ್ವಲ್ಪ ಹೊತ್ತಿನಲ್ಲಿಯೇ ಇಡೀ ಗೋದಾಮು ಆವರಿಸಿದೆ.ಕಿಟಕಿ, ಬಾಗಿಲಿನಿಂದ ಬೆಂಕಿ ಹಾಗೂ ದಟ್ಟಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಮಾಹಿತಿ ನೀಡಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಎರಡು ವಾಹನಗಳು ಸತತ ನಾಲ್ಕು ಗಂಟೆಗಳ ಕಾಲ ಶ್ರಮಿಸಿ ಬೆಂಕಿ ನಂದಿಸಿವೆ.
ಗೋದಾಮಿನಲ್ಲಿ ಯಾರೂ ಇಲ್ಲದಿದ್ದರಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಸುಮಾರು 30 ಲಕ್ಷ ರೂ. ಮೌಲ್ಯದ ಫ್ಲೈವುಡ್ಗಳು, ಮರಮುಟ್ಟುಗಳು ಬೆಂಕಿಗೆ ಆಹುತಿಯಾಗಿವೆ ಎಂದು ಅಂದಾಜಿಸಲಾಗಿದೆ.ಪ್ರಕರಣ ದಾಖಲಿಸಿರುವ ಕೆಂಪೇಗೌಡ ನಗರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








