ಎಂ ಎನ್ ಕೋಟೆ :
ಗುಬ್ಬಿ ತಾಲ್ಲೂಕಿನ ಕೋಟೆ ಗುಡ್ಡದ ಶ್ರೀ.ಲಕ್ಷ್ಮೀರಂಗನಾಥಸ್ವಾಮಿಯ ಪರೆವು ಅಂಗವಾಗಿ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ಅಭಿಷೇಕ,ಸುಪ್ರಭಾತ ಸೇವೆ ಹಾಗೂ ಪೂಜಾ ಕಾರ್ಯಕ್ರಮಗಳು ಜರುಗಿದವು.ಮಧ್ಯಾಹ್ನ 3ಗಂಟೆಗೆ ಮಹಾಮಂಗಳಾರತಿ ನಡೆಯಿತ್ತು.
ಸುತ್ತಮುತ್ತಲಿನ ಗ್ರಾಮಸ್ಥರು ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.ಭಕ್ತಾಧಿಗಳಿಗೆ ಮಹಾ ದಾಸೋಹ ಏರ್ಪಡಿಸಲಾಗಿತ್ತು. ದೇವಾಲಯ ಸಮಿತಿ ಪಧಾಧಿಕಾರಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








