ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ಶೀಘ್ರವೇ ಸುಗ್ರೀವಾಜ್ಞೆ : ಆರ್ ಅಶೋಕ್

ಬೆಂಗಳೂರು

    ಭೂಮಿ ಮಾರಾಟದ ಮೇಲಿನ ನಿರ್ಬಂಧ ಸಡಲಿಸುವ ಕರ್ನಾಟಕ ಭೂ ಸುಧಾರಣಾ ಕಾಯ್ದೆ 79ಎ 79 ಬಿ ತಿದ್ದುಪಡಿಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ನಿರ್ಧರಿಸಿದ್ದು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆಗೆ ಒಪ್ಪಿಗೆ ಪಡೆಯಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ,

    ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೂಸುಧಾರಣಾ ಕಾಯ್ದೆ ತಿದ್ದುಪಡಿಯನ್ನು ಸುಗ್ರೀವಾಜ್ಞೆ ಮುಖೇನ ಜಾರಿಗೆ ನಿರ್ಧರಿಸಿದ್ದು, ವಿಶೇಷಾಜ್ಞೆಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಡಲಾಗುವುದು ಎಂದರು.

    ಕೊರೋನಾ ಹಿನ್ನೆಲೆಯಲ್ಲಿ ವಿಧಾನಮಂಡಲ ಅಧಿವೇಶನ ಸದ್ಯಕ್ಕೆ ನಡೆಯುವುದು ಅನುಮಾನ. ಹಾಗಾಗಿ ತಿದ್ದುಪಡಿಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲಾಗುವುದು. ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂಡನೆ ಮಾಡಿ ತಿದ್ದುಪಡಿ ಮಸೂದೆಗೆ ಅಂಗೀಕಾರ ಪಡೆದುಕೊಳ್ಳುತ್ತೇವೆ ಎಂದರು.

   ನಮ್ಮ ರಾಜ್ಯದ ಐಟಿ ಬಿಟಿ ಜನರು ಇಲ್ಲಿನ ಕಾನೂನಿನಿಂದ ಭೂಮಿ ಖರೀದಿಸಲು ಸಾಧ್ಯವಾಗದೆ ನೆರೆ ರಾಜ್ಯಗಳಿಗೆ ಹೋಗಿ ಖರೀದಿ ಮಾಡುತ್ತಿದ್ದಾರೆ. ಬೇರೆ ರಾಜ್ಯಗಳ ಜೊತೆ ಸ್ಪರ್ಧೆ ಮಾಡಬೇಕಾದರೆ ನಮ್ಮ ಕೈಕಟ್ಟಿಕೊಂಡು ಇರಲು ಸಾಧ್ಯವಿಲ್ಲ ಹಾಗಾಗಿ ಯಾರು ಬೇಕಾದರೂ ಕೃಷಿ ಕ್ಷೇತ್ರಕ್ಕೆ ಬರಲು ಈ ಕಾಯ್ದೆ ತರುತ್ತಿದ್ದೇವೆ ಎಂದು ಅಶೋಕ್ ಬಲವಾಗಿ ಸಮರ್ಥಿಸಿಕೊಂಡರು.

    ಎಸಿ ತಹಶೀಲ್ದಾರ್ ಕಚೇರಿಯಲ್ಲಿ ಜನರಿಗೆ ಆಗುತ್ತಿದ್ದು ಕಿರುಕುಳವನ್ನು ತಪ್ಪಿಸುವ ಉದ್ದೇಶದಿಂದ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುತ್ತಿದ್ದೇವೆ. ರಾಜ್ಯದಲ್ಲಿ 11.79 ಲಕ್ಷ ಹೆಕ್ಟೇರ್ ಭೂಮಿ ಪಾಳು ಬಿದ್ದಿದೆ. ಇದರಲ್ಲಿ ಕೃಷಿ ಚಟುವಟಿಕೆ ನಡೆಯುತ್ತಿಲ್ಲ. ಕೃಷಿ ಕ್ಷೇತ್ರಕ್ಕೆ ಬರುವ ಆಸಕ್ತಿ ಇರುವವರಿಗೆ ಇನ್ನು ಮುಂದೆ ಅವಕಾಶ ಸಿಗಲಿದೆ ಐಟಿ-ಬಿಟಿ ಜನರು ಕೃಷಿ ಕಡೆ ಆಸಕ್ತಿ ತಳೆಯುತ್ತಿದ್ದು, ಇದರಿಂದ ಕೃಷಿ ಉತ್ಪನ್ನ ಹೆಚ್ಚಾಗಲಿದೆ. ಹಾಗಾಗಿ ಹಳ್ಳಿಗೆ ನಡೆಯಿರಿ ನೇಗಿಲಯೋಗಿ ಆಗಿ ಎನ್ನುವ ಘೋಷ ವಾಕ್ಯದೊಂದಿಗೆ ಯೋಜನೆ ಜಾರಿಗೊಳಿಸುತ್ತೇವೆ ಎಂದು ಹೇಳಿದರು.

    ಕಲ್ಯಾಣ ಮಂಟಪಗಳ ಮಾಲೀಕರು ಮುಂಗಡ ಪಾವತಿ ಮಾಡಿದವರಿಗೆ ತೆರಿಗೆ ಕಡಿತ ಮಾಡಿಕೊಂಡು ಬಾಕಿ ಹಣವನ್ನು ವಾಪಸ್ ಕೊಡಬೇಕು. ಯಾರಾದರೂ ಹಣ ವಾಪಸ್ ಕೊಡಲಿಲ್ಲ ಎಂದರೆ ತಹಸೀಲ್ದಾರ್ ಗಳಿಗೆ ದೂರು ನೀಡಿ, ಸರ್ಕಾರದಿಂದ ಹಣ ವಾಪಸ್ ಕೊಡಿಸುವ ಕೆಲಸ ಮಾಡುತ್ತೇವೆ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap