ಡಿ ಕೆ ರವಿ ಪತ್ನಿ ಕುಸುಮಾ ಕಾಂಗ್ರೆಸ್ ಸೇರ್ಪಡೆ..!

ಬೆಂಗಳೂರು:

   ಉಪಚುನಾವಣೆಗಳಿಗೆ ಪಕ್ಷಗಳು ರಣತಂತ್ರ ಮತ್ತು ಪ್ರತಿತಂತ್ರಗಳನ್ನು ಹೆಣೆಯುತ್ತಿರುವ ಸಂದರ್ಭದಲ್ಲಿ ದಿವಂಗತ ಐಎಎಸ್​ ಅಧಿಕಾರಿ ಡಿ.ಕೆ ರವಿ ಅವರ ಪತ್ನಿ ಎಚ್. ಕುಸುಮಾ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

    ಕುಸುಮಾ ಅವರು ತಂದೆ ಹನುಮಂತರಾಯಪ್ಪ ಅವರೊಡನೆ ಕೆಪಿಸಿಸಿ ಕಚೇರಿಗೆ ಆಗಮಿಸಿದಾಗ ಕಾಂಗ್ರೆಸ್ ಕಾರ್ಯಕರ್ತರು ಅವರನ್ನು ಆದರದಿಂದ ಬರಮಾಡಿಕೊಂಡರು.  ಬಳಿಕ ಕುಸುಮಾ ಅವರು ತಾವು ಪಕ್ಷಕ್ಕೆ ಸೇರ್ಪಡೆಯಾಗಿರುವ ಸಂಬಂಧ ಸದಸ್ಯತ್ವ ಅರ್ಜಿಯನ್ನು ಪಕ್ಷದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ನಿಡೀದ್ದಾರೆ.ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಡಿಸಿಎಂ ಜಿ. ಪರಮೇಶ್ವರ್  ಮೊದಲಾದವರು ಈ ಸಂದರ್ಭ ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap