ದಾವಣಗೆರೆ:
ಇಷ್ಟಪಟ್ಟು ಓದುವ ಓದು ಕೊನೆಯ ವರೆಗೂ ಉಳಿಯಲಿದೆ ಎಂದು ಕನ್ನಡ ಪ್ರಾಧ್ಯಾಪಕ ಬಸವರಾಜ್ ಹನುಮಲಿ ಅಭಿಪ್ರಾಯಪಟ್ಟರು.
ನಗರದ ಮಾಗನೂರು ಸರ್ವಮಂಗಳಮ್ಮ ಬಸಪ್ಪ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಶನಿವಾರ ರಾಷ್ಟ್ರೀಯ ಸೇವಾ ಯೋಜನಾ ಘಟಕ 1 ಮತ್ತು 2, ಯೂತ್ ರೆಡ್‍ಕ್ರಾಸ್ ಸ್ಕೌಟ್ಸ್ ಮತ್ತು ಗೈಡ್ಸ್ ರೇಂಜ್, ರೋವರ್ಸ್ ಚಟುವಟಿಕೆಗಳ ಉದ್ಘಾಟನೆ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಷ್ಟಪಟ್ಟು ಇಲ್ಲದ ಮನಸ್ಸಿನಿಂದ ಓದಿದರೆ, ಅಲ್ಪ ಕಾಲವೂ ಉಳಿಯುವುದಿಲ್ಲ. ಆದರೆ, ಇಷ್ಟ ಪಟ್ಟು ಓದುವ ಓದು ಕೊನೆ ವರೆಗೂ ಉಳಿಯಲಿದೆ. ಆದ್ದರಿಂದ ವಿದ್ಯಾರ್ಥಿಗಳು ಇಷ್ಟಪಟ್ಟು ಓದುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ವಿದ್ಯಾರ್ಥಿಗಳು ಇಡೀ ಜಗತ್ತಿಗೆ ಒಳಿತಾಗಬೇಕೆಂಬ ಮನಸ್ಥಿತಿಯನ್ನು ಬೆಳೆಸಿಕೊಳ್ಳುವ ಮೂಲಕ ಶಿವ ಸ್ವರೂಪಿಯಾಗಿರುವ ಗುರುಗಳನ್ನು ಗೌರವದಿಂದ ಕಾಣಬೇಕು.
ಆಗಮಾತ್ರ ವಿದ್ಯೆ ಒಲಿಯಲಿದೆ. ವಿದ್ಯಾರ್ಥಿಗಳು ಗುರುಹಿರಿಯರನ್ನು ಗೌರವಿಸಿದಾಗ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯವಾಗಲಿದೆ ಎಂದ ಅವರು, ಕಳೆದ ಹತ್ತು ವರ್ಷಗಳಿಗೆ ಹೋಲಿಸಿದರೆ ಪ್ರಸ್ತುತ ವಿದ್ಯಾರ್ಥಿಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ ಎಂದರು.
ಎನ್‍ಎಸ್‍ಎಸ್‍ನಿಂದ ವಿದ್ಯಾರ್ಥಿಗಳಲ್ಲಿ ಶಿಸ್ತು, ಪರಿಸರ ಪ್ರಜ್ಞೆ, ಗ್ರಾಮ ಸ್ವಚ್ಛತೆಗಳ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಹನುಮಂತಪ್ಪ ಅಧ್ಯಕ್ಷತೆ ವಹಿಸಿದ್ದರು. ಪ್ರಾಧ್ಯಾಪಕ್ರುಗಳಾದ ಡಾ.ಪರಮೇಶ್.ಎಸ್, ಕೆ.ಆರ್.ರಂಗಸ್ವಾಮಿ , ತಾರರಾಣಿ, ಶಂಕರಯ್ಯ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
