ಹಾವೇರಿ
ಹಾವೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಘಟಕ ತಂಬಾಕು ನಿಯಂತ್ರಣ ಕೋಶದಿಂದ ಶಿಕ್ಷಣ ಇಲಾಖೆ, ಪುರಸಭೆ, ನಗರಸಭೆ, ಬಿಆರ್‍ಸಿ ಅಧಿಕಾರಿಗಳು ಮತ್ತು ಆರೋಗ್ಯ ಇಲಾಖೆಯ ಆರೋಗ್ಯ ನಿರೀಕ್ಷಕರು ಆಹಾರ ಸುರಕ್ಷಿತ ಅಧಿಕಾರಿಗಳು ಮತ್ತು ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಿಗೆ, ಜಿಲ್ಲೆಯ ಆಯ್ದ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಯವರಿಗೆ 2003 COTPA ಕಾನೂನು ಕುರಿತು ಕಾರ್ಯಾಗಾರ ಜನವರಿ 29 ರಂದು ನಗರದ ಜಿಲ್ಲಾ ಆರೋಗ್ಯ ಭವನದಲ್ಲಿ ಜರುಗಿತು.
ಕಾರ್ಯಾಗಾರ ಉದ್ಘಾಟಿಸಿದ ಜಿಲ್ಲೆಯ ನೋಡೆಲ್ ಅಧಿಕಾರಿ ಡಾ ಪ್ರಶಾಂತ ಅವರು 2003 COTPA ಕಾನೂನು ಕುರಿತು ಮಾಹಿತಿ ನೀಡಿದರು. ಕಾರ್ಯಾಗಾರದ ಸದುಪಯೋಗಪಡೆದುಕೊಂಡು ಸಮುದಾಯದಲ್ಲಿ ಅರಿವು ಮೂಡಿಸುವ ಮೂಲಕ ತಂಬಾಕಿನಿಂದ ಉಂಟಾಗುವ ರೋಗಗಳನ್ನು ತಡೆಗಟ್ಟಬೇಕೆಂದು ಹೇಳಿದರು
ಕಾರ್ಯಾಗಾರದಲ್ಲಿ ಜಿಲ್ಲೆಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳಾದ ಡಾ. ಎಂ. ಜಯಾನಂದ, ಡಾ. ಜಗದೀಶ ಪಾಟೀಲ, ಮನರೋಗ ತಜ್ಞ ಡಾ.ಬಳಿಗಾರ, ತಾಲೂಕಾ ಆರೋಗ್ಯಾಧಿಕಾರಿ ಡಾ. ಪ್ರಭಾಕರ ಕುಂದೂರ, ಡಾ. ಸಂತೋಷ ದಡ್ಡಿ ಹಾಗೂ ವಿಭಾಗೀಯ ಸಮಾಲೋಚಕ ಮಹಾಂತೇಶ ಉಳ್ಳಾಗಡ್ಡಿ ಮುಂತಾದವರು ಹಾಜರಿದ್ದರು. ಆರೋಗ್ಯ ಮೇಲ್ವಿಚಾರಕ ಶಂಕರ ಸುತಾರ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಆಪ್ತ ಸಮಾಲೋಚಕ ದಾದಾಪೀರ ವಂದಿಸಿದರು.