ರಾಣಿಬೆನ್ನೂರ:
ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಿ ಬಾಳಬೇಕಾದರೆ ಸಂವಿಧಾನವು ನಮಗೆ ನೀಡಿರುವ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಚಾಚೂ ತಪ್ಪದೆ ಪಾಲಿಸಿದಾಗ ಮಾತ್ರ ಸಾಧ್ಯ ಎಂದು 2ನೇ ಹೆಚ್ಚುವರಿ ಜಿಲ್ಲಾ ವ ಸತ್ರ ನ್ಯಾಯಾಧೀಶ ಎಸ್.ಶ್ರೀಧರ ಹೇಳಿದರು.
ರವಿವಾರ ಇಲ್ಲಿನ ನ್ಯಾಯಾಲಯದ ಸಭಾಭವನದಲ್ಲಿ ತಾಲೂಕಾ ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ, ಪೊಲೀಸ್ ಇಲಾಖೆ ಮತ್ತು ಅಭಿಯೋಜನಾ ಇಲಾಖೆ ಇವರ ಆಶ್ರಯದಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನ ಶಿಲ್ಪಿ ಡಾ|ಬಿ.ಆರ್.ಅಂಬೇಡ್ಕರ್ ಅವರ ಸ್ಮರಣಾರ್ಥ ಸಂವಿಧಾನ ದಿನಾಚರಣೆ ಆಚರಿಸಲಾಗುತ್ತಿದ್ದು, ಸರ್ವರಿಗೂ ಕಾನೂನಿನ ಅರಿವು ಇರಬೇಕಾಗುತ್ತದೆ ಎಂದರು.
ಸಹಾಯಕ ಸರ್ಕಾರಿ ಅಭಿಯೋಜಕ ಕರಣ ಗುಜ್ಜರ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಕುರಿತು ಉಪನ್ಯಾಸ ನೀಡಿದರು. ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ತಾಲೂಕಾ ಕಾನೂನು ಸೇವಾ ಸಮಿತಿ ಅಧ್ಯಕ್ಷ ಬಿ.ಜಿ.ಪ್ರಮೋದ, ಹೆಚ್ಚುವರಿ ದಿವಾಣಿ ನ್ಯಾಯಾಧೀಶ ಹಾಗೂ ತಾಲೂಕಾ ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಅನೀಲ ಶೇಖನವರ,1ನೇಯ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶೆ ಎಸ್.ಎಲ್.ಲಾಡಖಾನ, ವಕೀಲರ ಸಂಘದ ಅಧ್ಯಕ್ಷ ಎಂ.ಬಿ.ಚಿನ್ನಪ್ಪನವರ, ಉಪಾಧ್ಯಕ್ಷ ಎಂ.ಎಸ್.ರೊಡ್ಡನವರ, ಅಭಿಯೋಜಕ ಸದಾನಂದ ಶಿರೂರ, ಪಿಎಸ್‍ಐ ಸುರೇಶ, ನ್ಯಾಯವಾದಿ ಕೆ.ಡಿ.ಮಡಿವಾಳರ, ಎಂ.ಎಸ್.ರೊಡ್ಡನವರ, ಕುಮಾರ ಎಳೆಹೊಳಿ, ಸಿದ್ದಪ್ಪ ಬಸಪ್ಪನವರ ಸೇರಿದಂತೆ ಮತ್ತಿತರರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
