ಹೊಳಲ್ಕೆರೆ:
ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಯೊಬ್ಬರಿಗೂ ಕಾನೂನು ಸೇವಾ ಸೌಲಭ್ಯಗಳನ್ನು ಒದಗಿಸಿಕೊಡುವ ಉದ್ದೇಶದಿಂದ ಉಚಿತವಾಗಿ ಕಾನೂನು ಸೇವಾ ಪ್ರಾಧಿಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ರವಿಕುಮಾರ್ ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅಭಿಯೋಜನೆ ಇಲಾಖೆ, ಕಂದಾಯ ಇಲಾಖೆ, ತಾಲ್ಲೂಕು ಪಂಚಾಯತ್, ಇವರ ಸಂಯುಕ್ತಾಶ್ರಯದಲ್ಲಿ ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದೇಶದ ಪ್ರತಿ ಪ್ರಜೆಯೂ ಕಾನೂನು ಸೇವೆಯಿಂದ ವಂಚಿತರಾಗಬಾರದು. ನ್ಯಾಯಾಲಯಗಳಿಗೆ ಬರುವ ಬಡವರಿಗೆ ಉಚಿತ ಕಾನೂನು ನೆರವು ನಈಡಲಾಗುತ್ತದೆ. ರಾಷ್ಟ್ರ, ರಾಜ್ಯ, ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಕಾನೂನು ಸೇವಾ ಪ್ರಾಧಿಕಾರದ ಕಚೇರಿಗಳನ್ನು ಪ್ರಾರಂಭಿಸಲಾಗಿದೆ. ನ್ಯಾಯಾಲಯದ ಮೇಲೆ ನಂಬಿಕೆ ಇಟ್ಟು ಬರುವ ಎಲ್ಲರಿಗೂ ನ್ಯಾಯಾದಾನ ಮಾಡುವುದು ಪ್ರಾಧಿಕಾರದ ಧ್ಯೇಯವಾಗಿದೆ ಎಂದು ವಿವರಿಸಿದರು.
ಕಾನೂನು ಸೇವೆಗಳ ಪ್ರಾಧಿಕಾರದವತಿಯಿಂದ ಪ್ರತಿ ತಿಂಗಳಲ್ಲಿ ನಾಲ್ಕೈದು ಬಾರಿ ಉಚಿತ ಕಾನೂನು ಅರಿವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಗ್ರಾಮೀಣ ಭಾಗದ ಓದು ಬರಹ ಗೊತ್ತಿಲ್ಲದ ಜನರಲ್ಲಿ ಕಾನೂನು ಅರಿವನ್ನು ಮೂಡಿಸುವುದು ಇದರ ಪ್ರಮುಖ ಉದ್ದೇಶವಾಗಿದೆ. ಸಂವಿಧಾನ ಪ್ರಜೆಗಳ ಜೀವನಕ್ಕೆ ಅವಶ್ಯವಕವಾದ ಕಾನೂನುಗಳನ್ನು ಜಾರಿಗೆ ತಂದಿದೆ. ಇಂಥ ಕಾನೂನುಗಳ ಬಗ್ಗೆ ತಿಳಿದುಕೊಂಡು, ಸರಿಯಾಗಿ ಬಳಸಿಕೊಂಡಾಗ ಕಾನೂನು ಸೇವಾ ಪ್ರಾಧಿಕಾರದ ಉದ್ದೇಶ ಸಾರ್ಥಕವಾಗುತ್ತದೆ ಎಂದರು.
ಕಕ್ಷಿದಾರನ ಸಮಯ ವ್ಯರ್ಥವಾಗದೇ, ಹಣ ಖರ್ಚಾಗದೆ ನ್ಯಾಯಾ ಒದಗಿಸುವುದೇ ನಮ್ಮ ಉದ್ದೇಶ ಎಂದರು.
ಇಓ ಕೆ.ಎನ್.ಮಹಾಂತೇಶ್, ವಕೀಲರ ಸಂಘದ ಅಧ್ಯಕ್ಷ ಎಸ್.ವಿಜಯ್, ಉಪಾಧ್ಯಕ್ಷ ಎಸ್.ರಂಗಸ್ವಾಮಿ, ಕಾರ್ಯದರ್ಶಿ ಸಿ.ಓ.ಮಹಾದೇವಪ್ಪ, ಮಾತನಾಡಿದರು. ವಕೀಲರುಗಳಾದ ಎಸ್.ವೇದಮೂರ್ತಿ, ಎಂ.ಬಿ.ಅರುಣ್ ಕುಮಾರ್, ತಾ.ಪಂ. ಎ.ಓ ಶಿವಕುಮಾರ್ ಉಪಸ್ಥಿತರಿದ್ದರು.
ವಕೀಲ ಎನ್.ಹೆಚ್.ಕೆಂಗಪ್ಪ ಪಂಚಾಯತ್ ರಾಜ ಕಾಯಿದೆ ಕುರಿತು, ವಕೀಲ ಹೆಚ್. ಮಲ್ಲಿಕಾರ್ಜುನಪ್ಪ ಕಾನೂನು ಸೇವೆಗಳ ಕಾಯಿದೆ ಕುರಿತು ಉಪನ್ಯಾಸ ನೀಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
