ಚಿತ್ರದುರ್ಗ
ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿಗಳ ಕಚೇರಿ, ಸಹಯೋಗದೊಂದಿಗೆ ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ ಜಾಥಾ ಕಾರ್ಯಕ್ರಮವೂ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಕಾರ್ಯಕ್ರಮ ಉದ್ಘಾಟಿಸಿದರು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ: ಜಯಪ್ರಕಾಶ್ ಅಧ್ಯಕ್ಷತೆ ಜಿಲ್ಲಾ ಆರೋಗ್ಯ ಮತ್ತು ಕು.ಕ.ಅಧಿಕಾರಿ ಡಾ: ಬಿ.ವಿ.ನೀರಜ್, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ: ಸುರೇಶ್ ಹೆಚ್, ಚಿತ್ರದುರ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ: ಪಾಲಾಕ್ಷ, ಆರೋಗ್ಯ ಇಲಾಖೆಯ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ಮೇಲ್ವಿಚಾರಕ ವರ್ಗದವರು ಭಾಗವಹಿಸಿದ್ದರು.
ಜಾಥಾ ಜಿಲ್ಲಾ ಆಸ್ಪತ್ರೆ ಪ್ರಾರಂಭವಾಗಿ ಡೆಂಟಲ್ ಕಾಲೇಜಿನವರೆಗೆ ಹೋಗಿ, ಮದಕರಿ ವೃತ್ತದಲ್ಲಿ ಅಂತ್ಯಗೊಂಡಿತ್ತು. ಈ ಸಂದರ್ಭದಲ್ಲಿ ಕುಷ್ಠ ರೋಗದ ಬಗ್ಗೆ ಜನತೆಯಲ್ಲಿ ಅರಿವನ್ನು ಮೂಡಿಸಿವ ಕರಪತ್ರವನ್ನು ಸಹಾ ಬಿಡುಗಡೆ ಮಾಡಲಾಯಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
