ದೇಶದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ರಚನೆ

ಚಿತ್ರದುರ್ಗ;

         ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಇತಿಹಾಸವಿದೆ. ಈ ದೇಶದಲ್ಲಿ ನಡೆದ ಹಲವು ಚುನಾವಣೆಯಲ್ಲಿ ಕೆಲವೊಮ್ಮೆ ಸೋತಿರಬಹುದು. ಆದರೆ ಕಾಂಗ್ರೆಸ್‍ನ ಗತ ವೈಭವ ಮರಳಿ ಬರುವ ಕಾಲ ದೂರವಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ವಿಭಾಗದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಹೇಳಿದರು

         ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ನಡೆದ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ವಿಭಾಗದ ಸಭೆಯಲ್ಲಿ ಉಪಾಧ್ಯಕ್ಷೆ ಮುಷ್ತರ್ ಅವರಿಗೆ ನೇಮಕಾತಿ ಪತ್ರ ನೀಡಿ ಅವರು ಮಾತನಾಡಿದರು.

        ಬರುವ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಕಾಂಗ್ರೆಸ್ ಪರ ಅಲೆ ಸೃಷ್ಟಿಯಾಗಿದೆ. ರಾಹುಲ್‍ಗಾಂಧಿ ನೇತೃತ್ವದಲ್ಲಿ ಪಕ್ಷದ ಸಂಘಟನೆ ಹಿಂದೆಂದಿಗಿಂತ ಉತ್ತಮವಾಗಿ ನಡೆಯುತ್ತಿದೆ. ದೊಡ್ಡ ಚರಿತ್ರೆ ಹೊಂದಿರುವ ಮತ್ತು ದೇಶಕ್ಕೆ ದೊಡ್ಡ ಪ್ರಮಾಣದಲ್ಲಿ ಕೊಡುಗೆ ನೀಡಿದ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕು ಎನ್ನುವ ಒಲವು ಜನರಲ್ಲಿ ವ್ಯಕ್ತವಾಗುತ್ತಿದೆ ಎಂದರು

       ಭಾರತೀಯ ಜನತಾ ಪಾರ್ಟಿಯ ನಾಯಕರು ಬರೀ ಮಾತಿನಲ್ಲಿ ಜನರನ್ನು ಮರಳು ಮಾಡುವ ಕಲೆ ರೂಢಿಸಿಕೊಂಡಿದ್ದಾರೆ. ಅಧಿಕಾರಕ್ಕೆ ಬಂದು ಐದು ವರ್ಷವಾದರೂ ದೇಶದಲ್ಲಿ ಯಾವುದೇ ಬದಲಾವಣೆ ತರದಿದ್ದರೂ ಜನರನ್ನು ದಿಕ್ಕು ತಪ್ಪಿಸುವ ಕೆಲಸವನ್ನು ಮಾತ್ರ ಮಾಡುತ್ತಿದ್ದಾರೆ. ಯುವ ಸಮೂಹವೂ ಈ ವಾಸ್ತವ ಸತ್ಯವನ್ನು ಅರ್ಥ ಮಾಡಿಕೊಳ್ಳುತ್ತಿದೆ ಎಂದು ನುಡಿದರು

          ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಸೋತಿರುವುದರಿಂದ ಪಕ್ಷದ ಸಂಘಟನೆಯಲ್ಲಿ ಅಲ್ಪಸಂಖ್ಯಾತರು ಹೆಚ್ಚು ತೊಡಗಿಕೊಳ್ಳಬೇಕು. ಇನ್ನೆರಡು ಮೂರು ತಿಂಗಳಲ್ಲಿ ಪಾರ್ಲಿಮೆಂಟ್ ಚುನಾವಣೆ ನಡೆಯಲಿರುವುದರಿಂದ ಸಂಸದ ಬಿ.ಎನ್.ಚಂದ್ರಪ್ಪ ನವರನ್ನು ಮತ್ತೆ ಗೆಲ್ಲಿಸಿ ಕೇಂದ್ರಕ್ಕೆ ಕಳಿಸಬೇಕಾಗಿದೆ ಎಂದು ಅಬ್ದುಲ್ ಜಬ್ಬಾರ್ ಹೇಳಿದರುಹಿಂದಿನ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಶ್ರಮ ಶಕ್ತಿ ಯೋಜನೆಯಡಿ ಸಿಗುವ ಸಾಲ ಸೌಲಭ್ಯಗಳನ್ನು ಅಲ್ಪಸಂಖ್ಯಾತರು ಬಳಸಿಕೊಂಡು ಸ್ವಾವಲಂಭಿಗಳಾಗಿ ಬದುಕು ಕಟ್ಟಿಕೊಳ್ಳಿ.

         ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಅಲ್ಪಸಂಖ್ಯಾತರಿಗೆ ಕೊಡಿಸುವ ಕೆಲಸ ಮಾಡಿ. ಚುನಾವಣೆ ಬಂದಾಗ ಯಾವುದೇ ಕಾರಣಕ್ಕೂ ಚದುರಬೇಡಿ. ಒಂದು ಪಕ್ಷದಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ ಮೊದಲು ಗುರುತಿಸಿಕೊಳ್ಳಿ. ನಂತರ ಅಧಿಕಾರ ಹುಡುಕಿಕೊಂಡು ನಿಮ್ಮ ಬಳಿ ಬರುತ್ತದೆ ಎಂದರು.

         ಈ ದೇಶದಲ್ಲಿ ಅಭಿವೃದ್ದಿ ಮತ್ತು ಶಾಂತಿಯ ವಿಚಾರದಲ್ಲಿ ಕಾಂಗ್ರೆಸ್‍ಗೆ ಬದ್ದತೆ ಇದೆ. ಕೃಷಿ, ಕೈಗಾರಿಕೆ, ಶಿಕ್ಷಣ, ರೈಲ್ವೆ, ಮಾಹಿತಿ ತಂತ್ರಜ್ಞಾನ, ರಕ್ಷಣಾ ಕ್ಷೇತ್ರವೂ ಒಳಗೊಂಡಂತೆ ಎಲ್ಲಾ ರಂಗಗಳಲ್ಲಿಯೂ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿ ಜಗತ್ತಿನಲ್ಲಿಯೇ ಗುರ್ತಿಸಿಕೊಂಡಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಆಗಿರುವ ದೊಡ್ಡ ಪ್ರಮಾಣದ ಸಾಧನೆಯನ್ನು ಕಾರ್ಯಕರ್ತರು ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಕರೆ ನೀಡಿದರು

         ಜಿಲ್ಲೆಯಲ್ಲಿ ಕಾಂಗ್ರೆಸ್‍ನ ಅಲ್ಪಸಂಖ್ಯಾತರ ಘಟಕವನ್ನು ಇನ್ನಷ್ಟು ಬಲ ಪಡಿಸಿ ಪಕ್ಷದ ಸಂಘಟನೆಯನ್ನು ವಿಸ್ತರಿಸಲಾಗುವುದು. ಅದಕ್ಕಾಗಿ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಹಕಾರ ನೀಡಬೇಕು ಎಂದು ಹೇಳಿದರುಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಾಂದ್‍ಪೀರ್, ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಹಸನ್‍ತಾಹೀರ್, ಆಜಾಂ, ನಾಸಿರುದ್ದಿನ್ ಈ ಸಂದರ್ಭದಲ್ಲಿ ಹಾಜರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link