ಬೆಂಗಳೂರು
ನಡೆದು ಕೊಂಡು ಹೋಗುತ್ತಿದ್ದ ಲೇವಾದೇವಿಗಾರರೊಬ್ಬರನ್ನು ಅಡ್ಡಗಟ್ಟಿ ಜಗಳ ತೆಗೆದು ಚೂರಿಯಿಂದ ಇರಿದು ಕೊಲೆಗೈದು ಪರಾರಿಯಾಗಿರುವ ದಾರುಣ ಘಟನೆ ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಬೈಯ್ಯಪ್ಪನಹಳ್ಳಿಯ ನಾಗವಾರ ಪಾಳ್ಯದಲ್ಲಿ ನೆಲೆಸಿದ್ದ ಶಂಕರ್ ಎಂದು ಕೊಲೆಯಾದ ಲೇವಾದೇವಿಗಾರರನ್ನು ಗುರುತಿಸಲಾಗಿದೆ. ಇತ್ತೀಚೆಗೆ ನಾರಾಯಣಪುರಕ್ಕೆ ವಾಸ್ತವ್ಯ ಬದಲಾಯಿಸಿದ್ದು ಭಾನುವಾರ ಸಂಜೆ ನಾಗವಾರ ಪಾಳ್ಯದ ಮೋರ್ ಬಳಿ ಶಂಕರ್ ನಡೆದುಕೊಂಡು ಹೋಗುತ್ತಿದ್ದಾಗ 3-4 ಮಂದಿ ದುಷ್ಕರ್ಮಿಗಳು ಅಡ್ಡಗಟ್ಟಿ ಜಗಳ ಮಾಡಿದ್ದಾರೆ.
ಜಗಳ ವಿಕೋಪಕ್ಕೆ ತಿರುಗಿದಾಗ ಶಂಕರ್ಗೆ ಚೂರಿಯಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ತೀವ್ರ ರಕ್ತ ಸೋರಿಕೆಯಿಂದ ಅಸ್ವಸ್ಥರಾಗಿದ್ದ ಶಂಕರ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಲಾಗಿದ್ದರು ಚಿಕಿತ್ಸೆ ಫಲಕಾರಿಯಾಗದೇ ಶಂಕರ್ ಸೋಮವಾರ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಬೈಯ್ಯಪ್ಪನಹಳ್ಳಿ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಣಕಾಸಿನ ವಿಚಾರವಾಗಿ ಈ ಹಿಂದೆ ದುಷ್ಕರ್ಮಿಗಳೊಂದಿಗೆ ಜಗಳ ನಡೆದಿದ್ದು ಅದೇ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಶಂಕರ್ನನ್ನು ಕೊಲೆ ಮಾಡಲು ಯತ್ನಿಸಿರುವ ಸಾಧ್ಯತೆಗಳಿವೆ ಎಂದು ಶಂಕಿಸಲಾಗಿದೆ.
ಇದಲ್ಲದೇ ವಾಟಾಳ್ ನಾಗರಾಜ್ ಬಂಟರಲ್ಲಿ ಜೂನಿಯರ್-ಸೀನಿಯರ್ ಎನ್ನುವ ವಿಚಾರಕ್ಕೆ ಗಲಾಟೆ ನಡೆದು ನಾರಾಯಣಸ್ವಾಮಿ ಬಲಗೈ ಬಂಟ ಪ್ರವೀಣ್ ಎಂಬಾತ ಗಲಾಟೆ ಮಾಡಿ ಈ ಕೃತ್ಯವೆಸಗಿದ್ದಾನೆ ಎಂದು ತಿಳಿದುಬಂದಿದ್ದು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಡಿಸಿಪಿ ರಾಹುಲ್ಕುಮಾರ್ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








