ಬಡವರ ಬಂಧು ಯೋಜನೆ ನಿಯಮಗಳನ್ನು ಸಡಿಲಗೊಳಿಸಲು ನಿರ್ಧಾರ:ಬಂಡೆಪ್ಪ ಕಾಶೆಂಪೂರ

ಬೆಂಗಳೂರು

         ಮುಂಬರುವ ರಾಜ್ಯ ಬಜೆಟ್‍ನಲ್ಲಿ ಸಾಲ ಮನ್ನಾ ಮಾತ್ರವಲ್ಲ ರೈತರಿಗೆ ಅನುಕೂಲವಾಗುವ ಹಲವಾರು ವಿನೂತನ ಯೋಜನೆಗಳನ್ನು ಮುಖ್ಯಮಂತ್ರಿಯವರು ಪ್ರಕಟಿಸಲಿದ್ದಾರೆ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ ತಿಳಿಸಿದ್ದಾರೆ.

         ವಿಧಾನಸೌಧದಲ್ಲಿಂದು ರೈತರ ಜತೆಗಿನ ಬಜೆಟ್ ಪೂರ್ವಭಾವಿ ಸಭೆ ಬಳಿಕ ಮಾತನಾಡಿದ ಅವರು, ರೈತರು ಸಾಕಷ್ಟು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಅವೆಲ್ಲವನ್ನೂ ಪರಿಗಣಿಸಿ ರೈತರಿಗೆ ಅನುಕೂಲವಾಗುವ ಹಲವು ಯೋಜನೆಗಳನ್ನು ಕುಮಾರಸ್ವಾಮಿ ಘೋಷಿಸಲಿದ್ದಾರೆ ಎಂದು ತಿಳಿಸಿದರು.

        ಇದೇ ವೇಳೆ “ಬಡವರ ಬಂಧು” ಯೋಜನೆಯಲ್ಲಿ ತೊಡಕಾಗಿದ್ದ ಕೆಲವು ನಿಯಮಗಳನ್ನು ಸಡಿಲಗೊಳಿಸಲು ನಿರ್ಧರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

        ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ನೀಡುವ “ಬಡವರ ಬಂಧು ” ಯೋಜನೆ ಜಾರಿಗೆ ಕೆಲವು ತೊಡಕುಗಳಿದ್ದವು. ಪ್ರಮುಖವಾಗಿ ಬೀದಿ ಬದಿ ವ್ಯಾಪಾರಿಗಳಿಗೆ ಸ್ಥಳೀಯ ಸಂಸ್ಥೆಗಳ ಗುರುತಿನ ಚೀಟಿ ಹಾಗೂ ರೇಷನ್ ಕಾರ್ಡ್ ದಾಖಲೆಯಾಗಿ ತೋರಿಸುವುದು ಕಡ್ಡಾಯವಾಗಿತ್ತು. ಈಗ ಆ ನಿಯಮಾವಳಿಯನ್ನು ಸಡಿಲಿಸಲಾಗಿದೆ. ಬೀದಿ ಬದಿ ವ್ಯಾಪಾರಿಗಳು ಮಾರಾಟ ಮಾಡುತ್ತಿರುವುದರ ಫೋಟೋ ಪಡೆದು ಅದರ ಆಧಾರದ ಮೇಲೆ ಸಾಲ ವಿತರಿಸುವಂತೆ ಸಹಕಾರ ಬ್ಯಾಂಕ್ ಗಳಿಗೆ ನಿರ್ದೇಶನ ನೀಡಿದ್ದೇವೆ ಎಂದು ತಿಳಿಸಿದರು.

         ಇನ್ನು 15 ದಿನಗಳ ಒಳಗಾಗಿ ರಾಜ್ಯದ 50,000 ಬೀದಿ ಬದಿ ವ್ಯಾಪಾರಿಗಳಿಗೆ ಯೋಜನೆಯ ಲಾಭ ದೊರೆಯಲಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ನಾಲ್ಕು ಲಕ್ಷ ಬೀದಿ ಬದಿ ವ್ಯಾಪಾರಿಗಳಿಗೆ ಇದನ್ನು ವಿಸ್ತರಿಸಲಾಗುತ್ತದೆ ಎಂದು ತಿಳಿಸಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap