ಬೆಂಗಳೂರು
12 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ 29 ವರ್ಷದ ಯುವಕನಿಗೆ ಜೀವಾವಧಿ ಶಿಕ್ಷೆ ವಿಧಿಸಿ ನಗರದ ಹೆಚ್ಚುವರಿ ಸಿಟಿ ಸಿವಿಲ್ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
2014ರಲ್ಲಿ 12 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸಂತೋಷ್ ಎಂಬಾತನ್ನು ಪೆÇಲೀಸರು ಬಂಧಿಸಿದ್ದರು. ಸಹಾಯಕ ಪೊಲೀಸ್ ಆಯುಕ್ತರಾದ ರವಿಪ್ರಸಾದ್ ಪ್ರಕರಣದ ತನಿಖೆ ನಡೆಸಿ ಎಫ್ಐಆರ್ ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು, 20 ಸಾವಿರ ರೂ. ದಂಡ ವಿಧಿಸಿದೆ.ಸರ್ಕಾರದ ಪರವಾಗಿ ಸಾರ್ವಜನಿಕ ಅಭಿಯೋಜಕ ಕೆ.ಜೆ.ಮೀನಾಕುಮಾರ್ ವಾದ ಮಂಡಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








