100 ವರ್ಷಕ್ಕೆ ಕಾಲಿಟ್ಟ ಲಯನ್ಸ್ ಸಂಸ್ಥೆ

ಗುಬ್ಬಿ

        ಲಯನ್ಸ್ ಸಂಸ್ಥೆ ಸೇವಾ ಮನೋಭಾವನೆಯಿಂದ ಪ್ರಪಂಚದಾಧ್ಯಂತ ಹಲವಾರು ಸೇವಾಕರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ ಎಂದು ಲಯನ್ಸ್ ಸಂಸ್ಥೆ ಅಧ್ಯಕ್ಷ ಉಂಡೆರಾಮಣ್ಣ ತಿಳಿಸಿದರು.

       ತಾಲ್ಲೂಕಿನ ಜಿ.ಹೊಸಹಳ್ಳಿ ಕ್ರಾಸ್‍ನಲ್ಲಿ ವಾಸಿಸುತ್ತಿರುವ ಹಕ್ಕಿ ಪಿಕ್ಕಿ ಸಮುದಾಯದ ಮಕ್ಕಳೊಂದಿಗೆ ಲಯನ್ಸ್ ಸಂಸ್ಥೆಯ ಸಂಸ್ಥಾಪಕ ಮೆಲ್ವಿನ್ ಜೋನ್ ಅವರ ಹುಟ್ಟು ಹಬ್ಬ ಮತ್ತು ಲಯನ್ಸ್ ಸಂಸ್ಥೆಗೆ 100 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕೇಕ್ ಕತ್ತರಿಸುವ ಮೂಲಕ ವಿನೂತನ ರೀತಿಯಲ್ಲಿ ನಡೆಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು

        ಗ್ರಾಮೀಣ ಶಾಲೆಗಳ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹ, ಶಾಲಾ ಕಾಲೇಜು ಆವರಣಗಳಲ್ಲಿ ಸಸಿಗಳನ್ನು ನೆಡುವ ಮತ್ತು ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸುವ ಕಾರ್ಯಕ್ರಮಗಳ ಜೊತೆಗೆ ಅಂಧರ ಬಾಳಿಗೆ ಬೆಳಕು ನೀಡುವಂತಹ ಮಹತ್ವದ ಕಣ್ಣಿನ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರವನ್ನು ಲಯನ್ಸ್ ಸಂಸ್ಥೆ ಪ್ರತಿ ತಿಂಗಳು ನಿರಂತರವಾಗಿ ನಡೆಸುತ್ತಿದ್ದು ಸಾರ್ವಜನಿಕ ಸೇವಾ ಕಾರ್ಯದಲ್ಲಿ ತನ್ನದೆ ಆದ ಮಹತ್ವದ ಸಾಧನೆ ಮಾಡಿದೆ ಮುಂದಿನ ದಿನಗಳಲ್ಲಿ ಮತ್ತಷ್ಟು ಸಮಾಜ ಸೇವಾ ಕಾರ್ಯಗಳನ್ನು ನಡೆಸುವ ಮೂಲಕ ಲಯನ್ಸ್‍ನ ಸೇವಾ ಕಾರ್ಯಗಳನ್ನು ನಿರಂತರವಾಗಿ ನಡೆಸುವುದಾಗಿ ತಿಳಿಸಿದರು.

        ಲಯನ್ಸ್ ಸಂಸ್ಥೆಯ ಕಾರ್ಯದರ್ಶಿ ಜಿ.ಬಿ.ಮಲ್ಲಪ್ಪ ಮಾತನಾಡಿ ಲಯನ್ಸ್ ಸಂಸ್ಥೆಗೆ ನೂರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಹಕ್ಕಿಪಿಕ್ಕಿ ಸಮುದಾಯ ವಾಸಿಸುವ ಗುಡಿಸಿಲಿನಲ್ಲಿ ವಿನೂತನ ರೀತಿಯಲ್ಲಿ ಕಾರ್ಯಕ್ರಮವನ್ನು ನಡೆಸುತ್ತಿರುವುದಾಗಿ ತಿಳಿಸಿದರು .ಕಾರ್ಯಕ್ರಮದಲ್ಲಿ ಲಯನ್ಸ್ ಸಂಸ್ಥೆಯ ಖಜಾಂಚಿ ಸಿದ್ದಪ್ಪಗುಜ್ಜರಿ, ಡಿಸ್ಟ್ರಿಕ್ ಛೇರ್ ಪರ್ಸನ್ ಎ.ಎಸ್.ರೇಣುಕಯ್ಯ, ಪದಾಧಿಕಾರಿ ಡಿ.ಆರ್.ಕೀರ್ತಿರಾಜ್, ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ದೊಡ್ಡಯ್ಯ, ಕೆ.ಆರ್.ಸಿದ್ದೇಶ್ ಇತರರು ಭಾಗವಹಿಸಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link