ಗುಬ್ಬಿ
ಶಿಕ್ಷಣ, ಪರಿಸರ ಸೇರಿದಂತೆ ವಿವಿಧ ಆರೋಗ್ಯ ಸೇವಾ ಕಾರ್ಯಕ್ರಮಗಳ ಜೊತೆಗೆ ಕುರಿಗಳಿಗೆ ಜಂತು ನಾಶಕ ಔಷಧಿಯನ್ನು ಕುಡಿಸುವ ಕಾರ್ಯಕ್ರಮವನ್ನು ಲಯನ್ಸ್ ಸಂಸ್ಥೆ ವತಿಯಿಂದ ಮಾಡಲಾಗುತ್ತಿದೆ ಎಂದು ಲಯನ್ಸ್ ಸಂಸ್ಥೆ ಅಧ್ಯಕ್ಷ ಉಂಡೆ ರಾಮಯ್ಯ ತಿಳಿಸಿದರು.
ತಾಲ್ಲೂಕಿನ ಸಿಂಗೋನಹಳ್ಳಿ ಗ್ರಾಮದಲ್ಲಿ 350 ಕ್ಕೂ ಹೆಚ್ಚು ಕುರಿಗಳಿಗೆ ಉಚಿತ ಜಂತು ನಾಶಕ ಔಷಧಿಯನ್ನು ಕುಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಲಯನ್ಸ್ ಸಂಸ್ಥೆ ಆರೋಗ್ಯ, ಶಿಕ್ಷಣ ಸೇರಿದಂತೆ ವಿವಿಧ ಸಮಾಜ ಸೇವಾ ಕಾರ್ಯಗಳನ್ನು ನಿರಂತರವಾಗಿ ಮಾಡುತ್ತಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಸೇವಾ ಕಾರ್ಯಗಳನ್ನು ಮಾಡಲಾಗುವುದೆಂದು ತಿಳಿಸಿದರು.
ಲಯನ್ಸ್ ಸಂಸ್ಥೆ ಕಾರ್ಯದರ್ಶಿ ಜಿ.ಬಿ.ಮಲ್ಲಪ್ಪ ಮಾತನಾಡಿ, ಲಯನ್ಸ್ ಸಂಸ್ಥೆ ವತಿಯಿಂದ ಶೈಕ್ಷಣಿಕ ಮತ್ತು ಸಾಮಾಜಿಕ ಸೇವಾ ಕಾರ್ಯಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದು ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ಆರೋಗ್ಯ ಶಿಬಿರಗಳು ಸೇರಿದಂತೆ ಗ್ರಾಮೀಣ ಭಾಗದ ಶಾಲೆಗಳ ಮಕ್ಕಳಿಗೆ ಸಮವಸ್ತ್ರ ಮತ್ತು ಲೇಖನ ಸಾಮಗ್ರಿಗಳನ್ನು ವಿತರಿಸುವ ಮೂಲಕ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾದ ಸೇವಾ ಕಾರ್ಯಗಳನ್ನು ಮಾಡುತ್ತಿರುವುದಾಗಿ ತಿಳಿಸಿದರು.
ಇದೆ ಸಂದರ್ಭದಲ್ಲಿ 350 ಕ್ಕೂ ಹೆಚ್ಚು ಕುರಿಗಳಿಗೆ ಜಂತು ನಾಶಕ ಔಷಧಿಗಳನ್ನು ಕುಡಿಸಲಾಯಿತು.ಕಾರ್ಯಕ್ರಮದಲ್ಲಿ ಲಯನ್ಸ್ ಸಂಸ್ಥೆಯ ಖಜಾಂಚಿ ಸಿದ್ದಪ್ಪ ಗುಜ್ಜರಿ, ಪದಾಧಿಕಾರಿಗಳಾದ ಎಸ್.ಆರ್.ಎಸ್.ರೇಣುಕಯ್ಯ, ಡಿ.ಆರ್.ಕೀರ್ತಿರಾಜ್, ಪಶುವೈದ್ಯಾಧಿಕಾರಿ ಡಾ.ಪುರುಶೋತ್ತಮ್, ಕಮಲನಾಭಾಚಾರ್, ಪಿ.ಎಸ್.ಸುರೇಶ್‍ಬಾಬು ಮುಂತಾದವರು ಭಾಗವಹಿಸಿದ್ದರು.