ಬೆಂಗಳೂರು
ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಮಡಿದ ಮಹನೀಯರ ಆದರ್ಶವನ್ನಾಗಿ ಇಟ್ಟುಕೊಳ್ಳುವ ಮೂಲಕ ದೇಶಕ್ಕಾಗಿಯೇ ಜೀವನ ಮತ್ತು ದೇಶಕ್ಕಾಗಿಯೇ ಮರಣ ಎಂಬ ಮನೋಭಾವದಡಿ ಯುವಜನರು ಕಾರ್ಯವ ನಿರ್ವಹಿಸಬೇಕಾಗಿದೆ ಎಂದು ರಾಜ್ಯಪಾಲ ವಜುಭಾಯಿ ವಾಲಾ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ವಿಭಾಗದ ವತಿಯಿಂದ ನಡೆಯುತ್ತಿರುವ ನಾಲ್ಕು ದಿನಗಳ ರಾಷ್ಟ್ರಮಟ್ಟದ ರೋವರ್ ಮತ್ತು ರೇಂಜರ್ ಸಮಾವೇಶದಲ್ಲಿ ಪಾಲ್ಗೋಂಡು ಮಾತನಾಡಿದ ಅವರು, ದೇಶದ ಪ್ರತಿಯೊಬ್ಬ ಪ್ರಜೆಯೂ ಜಾತಿ, ಧರ್ಮ, ಭಾಷೆ ಮತ್ತು ಪ್ರಾಂತ್ಯಗಳ ಬೇಧವನ್ನು ತೊರೆದು ಒಂದೇ ದೇಶ ಎಂಬ ಮನೋಭಾವವನ್ನು ಹೊಂದಬೇಕು ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








