ಹುಳಿಯಾರಿನಲ್ಲಿ ಸರ್ಕಾರಿ ಎಲ್‍ಕೆಜಿ ಶಾಲೆ ಆರಂಭ

ಹುಳಿಯಾರು

      ಹುಳಿಯಾರಿನ ಕರ್ನಾಟಕ ಪಬ್ಲಿಕ್ ಸ್ಕೂಲ್‍ನಲ್ಲಿ ಈ ವರ್ಷದಿಂದ ಎಲ್‍ಕೆಜಿ ಮತ್ತು ಯುಕೆಜಿ ಶಾಲೆಗಳನ್ನು ಆರಂಭಿಸಲಾಗಿದ್ದು ಪ್ರವೇಶ ಪ್ರಕ್ರಿಯೆ ನಡೆಯುತ್ತಿದ್ದು ಆಸಕ್ತ ಪೋಷಕರು ತಮ್ಮ ಮಕ್ಕಳನ್ನು ಸೇರಿಸುವಂತೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಚಾರ್ಯ ಪ್ರಸನ್ನಕುಮಾರ್ ತಿಳಿಸಿದ್ದಾರೆ.

       ಈ ಸಂಬಂಧ ಪತ್ರಿಕಾಗೋಷ್ಠಿ ನಡೆಸಿದ ಅವರು ಹುಳಿಯಾರಿ ಎಂಪಿಎಸ್ ಶಾಲೆ, ಸರ್ಕಾರಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳನ್ನು ಒಟ್ಟಿಗೆ ಸೇರಿಸಿ ಸರ್ಕಾರ ಕರ್ನಾಟಕ ಪಬ್ಲಿಕ್ ಸ್ಕೂಲ್ ಮಾಡಿದ್ದು ಇದರಡಿ ಎಲ್‍ಕೆಜಿಯಿಂದ 12 ನೇ ತರಗತಿಯವರೆವಿಗೆ ಕನ್ನಡ ಮತ್ತು ಇಂಗ್ಲೀಷ್ ಮಾಧ್ಯಮದಲ್ಲಿ ಶಿಕ್ಷಣ ಕೊಡಲಿದೆ ಎಂದು ತಿಳಿಸಿದರು.

       ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಕ್ಲಾಸ್, ಕಂಪ್ಯೂಟರ್ ಶಿಕ್ಷಣ, ಇಂಗ್ಲೀಷ್ ಸ್ಪೀಕಿಂಕ್ ಕೋರ್ಸ್, ಉತ್ತಮ ಗ್ರಂಥಾಲಯ, ವಿದ್ಯಾರ್ಥಿ ಹಾಗೂ ಶಿಕ್ಷಕರಿಗೆ ಬಯೊಮೆಟ್ರಿಕ್, ಉಚಿತ ಸಮವಸ್ತ್ರ, ಉಚಿತ ಪಠ್ಯ ಪುಸ್ತಕ ದೊರೆಯಲಿದೆ. ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಬೈಸಿಕಲ್ ಸಹ ನೀಡಲಾಗುತ್ತದೆ. ಅಲ್ಲದೆ ಅಕ್ಷರ ದಾಸೋಹ, ಕ್ಷೀರ ಭಾಗ್ಯ ಯೋಜನೆ ಸಹ ಜಾರಿಯಲ್ಲಿರುತ್ತದೆ ಎಂದು ತಿಳಿಸಿದರು.

       ಅರ್ಹ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್, ವಿದ್ಯಾರ್ಥಿ ವೇತನ, ಸಂಗೀತ ಮತ್ತು ಹೊಲಿಗೆ ತರಬೇತಿ, ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ದಸರಾ ಹಾಗೂ ಬೇಸಿಗೆ ರಜಾ ದಿನಗಳಲ್ಲೂ ಸಹ ವಿಶೇಷ ತರಗತಿ ನಡೆಸಲಾಗುವುದು, ಜೊತೆಗೆ ವೃತ್ತಿಪರ ಮಾರ್ಗದರ್ಶನ, ಸಿಇಟಿ, ಎನ್‍ಇಇಟಿ ಪರೀಕ್ಷಾ ತರಬೇತಿ, ವ್ಯಕ್ತಿತ್ವ ವಿಕಸನ ಹಾಗೂ ಜೀವನ ಕೌಶಲ್ಯ ತರಬೇತಿ ಆಯೋಜಿಸಲಾಗುವುದು ಎಂದರು.

       ಪ್ರಸಕ್ತ ಶೈಕ್ಷಣಿಕ ವರ್ಷದ ಎಲ್‍ಕೆಜಿಯಿಂದ ಏಳನೇ ತರಗತಿ ವರೆಗಿನ ತರಗತಿಗಳು ಹುಳಿಯಾರು ಪಟ್ಟಣದ ಎಂಪಿಎಸ್ ಶಾಲೆಯಲ್ಲಿ ಆರಂಭವಾಗಲಿವೆ. ಹಂತ ಹಂತವಾಗಿ ಅಭಿವೃದ್ಧಿಗೊಂಡು ಎಲ್ಲ ತರಗತಿಗಳು ಪದವಿ ಪೂರ್ವ ಕಾಲೇಜು ಆವರಣದಲ್ಲಿ ಒಂದೇ ಸೂರಿನಡಿ ನಡೆಯಲಿವೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ವಾಹನ ವ್ಯವಸ್ಥೆ ಹಾಗೂ ಹಾಸ್ಟೆಲ್ ವ್ಯವಸ್ಥೆ ಕೂಡ ಮಾಡಲಾಗುವುದು. ಹುಳಿಯಾರು ಸುತ್ತಮುತ್ತಲ ಎಲ್ಲ ಗ್ರಾಮಗಳ ಮಕ್ಕಳಿಗೂ ಪ್ರವೇಶದ ಅವಕಾಶ ಇರುವುದರಿಂದ ಸದುಪಯೋಗ ಪಡಿಸಿಕೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.

      ಹೆಚ್ಚಿನ ಮಾಹಿತಿಗೆ ಪ್ರಾಥಮಿಕ ಶಾಲಾ ವಿಭಾಗಕ್ಕೆ ವೈ.ಆರ್.ಅಂಬಿಕಾ (7899518093), ಪ್ರೌಢಶಾಲಾ ವಿಭಾಗಕ್ಕೆ ಡಿ.ಇಂದಿರಾ (9741260402), ಪದವಿ ಪೂರ್ವ ಕಾಲೇಜು ವಿಭಾಗಕ್ಕೆ ಪ್ರಸನ್ನಕುಮಾರ್ (9482679699) ಸಂಪರ್ಕಿಸಬಹುದು ಎಂದು ಅವರು ತಿಳಿಸಿದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link