ಯಲಹಂಕ : ನೇಣಿಗೆ ಶರಣಾದ ಕಾಂಗ್ರೆಸ್ ಮುಖಂಡ .!!

ಬೆಂಗಳೂರು

    ಸ್ಥಳೀಯ ಕಾಂಗ್ರೆಸ್ ಮುಖಂಡರೊಬ್ಬರು ನೇಣಿಗೆ ಶರಣಾಗಿರುವ ದುರ್ಘಟನೆ ಯಲಹಂಕ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.

   ಯಲಹಂಕ ಉಪನಗರ ಪೊಲೀಸ್ ಠಾಣೆಯ ಸಮೀಪದಲ್ಲಿಯೇ ವಾಸಿಸುತ್ತಿದ್ದ ವೀರಣ ಗೌಡ(50) ರಾತ್ರಿ 8ರ ವೇಳೆ ಪತ್ನಿ ಹೊರ ಹೋಗಿದ್ದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಡಿಸಿಪಿ ಡಾ.ಭೀಮಾಶಂಕರ್ ಗುಳೇದ್ ತಿಳಿಸಿದ್ದಾರೆ.ಹೆಸರುಘಟ್ಟ ಮೂಲದ ವೀರಣ್ಣ ಗೌಡ ಅವರು ಯಲಹಂಕ ಉಪನಗರದಲ್ಲಿ ಹಲವು ವರ್ಷಗಳಿಂದ ಕಾಂಗ್ರೆಸ್ ಮುಖಂಡರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದು ರಿಯಲ್ ಎಸ್ಟೇಟ್ ವ್ಯವಹಾರ ಕೂಡ ನಡೆಸುತ್ತಿದ್ದರು.ಅವರಿಗೆ ಇಬ್ಬರು ಮಕ್ಕಳಿದ್ದು ಬೇರೆ ಕಡೆ ವಾಸಿಸುತ್ತಿದ್ದರು.

    ಪತ್ನಿಯೊಂದಿಗೆ ನೆಲೆಸಿದ್ದ ಅವರು ಕೆಲ ದಿನಗಳಿಂದ ಹೊಟ್ಟೆ ನೋವು ಇನ್ನಿತರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಅದರಿಂದ ಬೇಸತ್ತು ಮದ್ಯಪಾನ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಯಲಹಂಕ ಉಪನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link