ಕಂಟೈನ್ ಮೆಂಟ್ ಜೋನ್ ಹೊರತು ಪಡಿಸಿ
ಬೆಂಗಳೂರು:
ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ ವಿಚಾರವಾಗಿ ಎದ್ದಿರುವ ಉಹಾಪೋಹಗಳಿಗೆ ಇಂದು ಸಿಎಂ ಬಿ ಎಸ್ ಯಡಿಯೂರಪ್ಪ ಅವರು ಅಂತ್ಯ ಹಾಡಿದ್ದಾರೆ. ಮೇ 4ರ ನಂತರ ಕಂಟೈನ್ ಮೆಂಟ್ ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಕಡೆಗಳಲ್ಲಿ ಲಾಕ್ ಡೌನ್ ಸಡಿಲಿಕೆ ಬಗ್ಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟ ಮಾಹಿತಿ ಸಿಕ್ಕಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಮುಖ್ಯಮಂತ್ರಿ, ಕೊರೋನಾ ಸೋಂಕು ಹೆಚ್ಚಿನ ಪ್ರಕರಣಗಳು ವರದಿಯಾಗಿರುವ ಕಂಟೈನ್ ಮೆಂಟ್ ಪ್ರದೇಶಗಳಲ್ಲಿ ಮೇ 4ರ ಬಳಿಕವೂ ಲಾಕ್ ಡೌನ್ ಮುಂದುವರೆಯಲಿದೆ. ಆದರೆ, ಉಳಿದ ವಲಯಗಳಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಲಾಗುತ್ತಿದೆ. ಈ ಸಂಬಂಧ ಕೇಂದ್ರ ಸರ್ಕಾರದಿಂದ ಸ್ಪಷ್ಟ ಮಾಹಿತಿ ದೊರೆತಿದೆ. ಸದ್ಯದಲ್ಲಿಯೇ ಮಾರ್ಗಸೂಚಿಗಳು ಸಿಗಲಿವೆ ಎಂದರು.
ಕೊರೋನಾ ಎರಡು ಮೂರು ತಿಂಗಳು ಮುಂದುವರೆದರೂ ಅಚ್ಚರಿಯಿಲ್ಲ,ಆದರೆ, ಆರ್ಥಿಕ ಚಟುವಟಿಕೆ ಆರಂಭಿಸಬೇಕಾಗಿದೆ. ಈ ಬಗ್ಗೆ ಪ್ರಧಾನಿ ಮೋದಿ ಕೂಡಾ ಚಿಂತನೆ ನಡೆಸಿದ್ದಾರೆ. ಹೀಗಾಗಿ ಬೆಂಗಳೂರು ಸುತ್ತಮುತ್ತ ಕೈಗಾರಿಕೆಗೆ ಪುನರ್ ಆರಂಭಿಸುವ ಸಂಬಂಧ ಸಂಜೆ ಕೈಗಾರಿಕೊದ್ಯಮಿಗಳ ಜೊತೆ ಸಭೆ ನಡೆಸಲಾಗುವುದು, ಹೋಟೆಲ್, ಮಾಲ್ , ಸೆಲೂನ್ ಗಳನ್ನು ಸದ್ಯಕ್ಕೆ ಆರಂಭಿಸುವ ಯಾವುದೇ ಪ್ರಸ್ತಾವ ಕೇಂದ್ರದಿಂದ ಬಂದಿಲ್ಲ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ