ಕಲಬುರಗಿ
ಇದೇ ಫೆಬ್ರವರಿಯಲ್ಲಿ ಕಲಬುರ್ಗಿಯಲ್ಲಿ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ ಮಾಡಲಾಗಿದೆ.
ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಬಿ ಶರತ್ ಅವರು ಲಾಂಛನ ಬಿಡುಗಡೆ ಮಾಡಿದರು. ಕಲ್ಯಾಣ ಕರ್ನಾಟಕದ ಐತಿಹಾಸಿಕ ಪರಂಪರೆಯನ್ನು ಲಾಂಛನ ಬಿಂಬಿಸುವಂತಿದ್ದು, ಕವಿರಾಜಮಾರ್ಗ ಗ್ರಂಥವನ್ನು ಪ್ರಧಾನವಾಗಿ ಎದ್ದುಕಾಣುವಂತೆ ಮಾಡಲಾಗಿದೆ. ಜೊತೆಗೆ ಕಲಬುರಗಿ ಐತಿಹಾಸಿಕ ಸ್ಥಳಗಳಾದ ಶರಣ ಬಸವ ದೇವಸ್ಥಾನ, ಬೌದ್ದ ಸ್ತೂಪವನ್ನೂ ಒಳಗೊಂಡು ಆಕರ್ಷಣಿಯವಾಗಿ ಮೂಡಿ ಬಂದಿದೆ.
ಕಲಬುರಗಿ ವಿಶ್ವವಿದ್ಯಾಲಯದ ಆವರಣದಲ್ಲಿ ಫೆಬ್ರವರಿ 5, 6 ಹಾಗೂ 7 ರಂದು 85 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸಮ್ಮೇಳನಕ್ಕೆ 16 ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಡಿಸೆಂಬರ್‌ನಲ್ಲಿ ಮೂರು ದಿನಗಳ ಸಾಹಿತ್ಯ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಉಪ ಚುನಾವಣೆ ಹಿನ್ನಲೆಯಲ್ಲಿ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಯಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
