ಬೆಂಗಳೂರು:
ರಾಜ್ಯದಲ್ಲಿ ಇದೇ 23 ರಂದು ನಡೆಯಲಿರುವ 2ನೇ ಹಂತದ ಲೋಕಸಭಾ ಚುನಾವಣಾ ಕಣದಲ್ಲಿ 282 ಅಭ್ಯರ್ಥಿಗಳು ಅಂತಿಮವಾಗಿ ಉಳಿದಿದ್ದಾರೆ. 36 ನಾಮಪತ್ರಗಳು ತಿರಸ್ಕೃತಗೊಂಡಿವೆ.
171 ಪಕ್ಷೇತರರು ಹಾಗೂ ರಾಷ್ಟ್ರೀಯ ಪಕ್ಷಗಳ 39 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬೀದರ್ ಕ್ಷೇತ್ರದಲ್ಲಿ ಅತಿ ಹೆಚ್ಚಿನ 8 ನಾಮಪತ್ರಗಳು ತಿರಸ್ಕೃತವಾಗಿವೆ.
ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಹೆಚ್ಚು ನಾಮಪತ್ರಗಳು ಸ್ವೀಕಾರವಾಗಿವೆ. ಉಮೇದುವಾರಿಕೆ ವಾಪಸ್ ಪಡೆಯಲು ನಾಳೆ ಕೊನೆಯ ದಿನವಾಗಿದ್ದು, ನಂತರ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ.ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ ಕ್ಷೇತ್ರಗಳಿಗೆ 23 ರಂದು ಚುನಾವಣೆ ನಡೆಯಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
