ದಾವಣಗೆರೆ
ಜಿಲ್ಲಾ ಸ್ವೀಪ್ ಸಮಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕತಿ ಇಲಾಖೆ, ಯುವ ಸಮೂಹ, ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘ, ವಿವಿ ಲಲಿತಕಲಾ ಮಹಾವಿದ್ಯಾಲಯ, ಹಿಮಾಲಯನ್ ಅಡ್ವೆಂಚರ್ ಅಂಡ್ ಸ್ಪೋರ್ಟ್ ಇವರ ಸಹಯೋಗದೊಂದಿಗೆ ಗುರುವಾರ ನಗರದ ಹೈಸ್ಕೂಲ್ ಮೈದಾನದಲ್ಲಿ ಮತದಾರರ ಜಾಗೃತಿ ಉತ್ಸವ – 2019ರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಚ್. ಬಸವರಾಜೇಂದ್ರ ಅವರು ಮತ ಜಾಗೃತಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದರು. ಲೊಕಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಹ¯ವಾರು ಕಾರ್ಯಕ್ರಮಗಳನ್ನು ಜಿಲ್ಲಾ ಸ್ವೀಪ್ ಸಮಿತಿಯಿಂದ ಮಾಡಲಾಗಿದೆ.
ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳಿಂದ ಗ್ರಾಮ ಪಂಚಾಯಿತಿವರೆಗಿನ ಎಲ್ಲಾ ಇಲಾಖೆಗಳಿಂದ ಸಾರ್ವಾಜನಿಕರಲ್ಲಿ ಜಾಗೃತಿ ಮೂಡಿಸಲು ವಿವಿಧ ರೀತಿಯ ಮತ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ಯಶಸ್ವಿಯಾಗಿ ನಿರ್ವಹಿಸಲಾಗಿದೆ. ಇದರಿಂದ ಸಾರ್ವಜನಿಕರು ಮತದಾನ ಪ್ರಕ್ರಿಯಲ್ಲಿ ಅಧಿಕ ಪ್ರಮಾಣದಲ್ಲಿ ಪಾಲ್ಗೋಳ್ಳುವ ನಿರೀಕ್ಷೆ ವ್ಯಕ್ತ ಪಡಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಆಯೋಜಿಸಲಾದ ಸಾಮೂಹಿಕ ಚಿತ್ರರಚನೆ, ಭಿತ್ತಿ ಚಿತ್ರ ರಚನಾ ಸ್ಪರ್ಧೆ, ಗ್ರಾಮೀಣ ಕ್ರೀಡೆಗಳ ಸ್ಪರ್ಧೆಗಳಾದ ಹಗ್ಗ-ಜಗ್ಗಾಟ, ಮಡಿಕೆ ಹೊಡೆಯುವುದು, ರಂಗೋಲಿ ಸ್ಪರ್ಧೆ, ಮತದಾನ ಜಾಗೃತಿ ಗಾಯನ, ಜಾನಪದ ತಂಡಗಳ ಪ್ರದರ್ಶನ, ಮೆಹಂದಿ ಸಂಭ್ರಮ, ಸ್ಕಿನ್ ಆರ್ಟ್ ಮತ್ತು ಸಾಹಸ ಕ್ರೀಡಾ ಚಟುವಟಿಕೆಗಳ ಮೂಲಕ ಸಾರ್ವಜನಿಕರಿಗೆ ಮತದಾನ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಲೋಕಸಭಾ ಚುನಾವಣೆಯ ಸಾಮಾನ್ಯ ವೀಕ್ಷಕರಾದ ಆನಂದ್ ಶರ್ಮಾ, ಜಿಪಂ. ಉಪಕಾರ್ಯದರ್ಶಿ ಭೀಮಾನಾಯ್ಕ್, ಜಿಪಂ. ಮುಖ್ಯ ಲೇಕ್ಕಾಧಿಕಾರಿ ಆಂಜನೇಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ಶ್ರೀನಿವಾಸ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೆರಿ, ಸಿಡಿಪಿಓ ವೀಣಾ ಎಂ. ಸೇರಿದಂತೆ ಜೆ.ಹೆಚ್ ಪಟೇಲ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.