ಮಧುಗಿರಿ
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೃಷಿ ಮತ್ತು ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಸೂದೆಗಳನ್ನು ಜಾರಿಗೆ ತಂದಿರುವುದನ್ನು ಖಂಡಿಸಿ, ತಾಲ್ಲೂಕು ರೈತ ಸಂಘ, ಕನ್ನಡಪರ ಸಂಘಟನೆಗಳು, ದಲಿತಪರ ಸಂಘಟನೆಗಳು, ಬ್ಲಾಕ್ ಕಾಂಗ್ರೆಸ್, ವಕೀಲರ ಸಂಘ, ಬೀದಿ ಬದಿ ವ್ಯಾಪಾರಿಗಳ ಸಂಘ ಹಾಗೂ ಕಟ್ಟಡ ಕಾರ್ಮಿಕರ ಸಂಘಟನೆಗಳ ವತಿಯಿಂದ ಕರೆ ನೀಡಿದ್ದ ಮಧುಗಿರಿ ಬಂದ್‍ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಪಟ್ಟಣದ ಪುರಸಭೆ ಆವರಣದಲ್ಲಿ ನೂರಾರು ಸಂಖ್ಯೆಯಲ್ಲಿ ರೈತರು ಹಾಗೂ ವಿವಿಧ ಸಂಘಟನೆಯ ಪದಾಧಿಕಾರಿಗಳು ಜಮಾವಣೆಗೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ಧ ರೈತರು ಧಿಕ್ಕಾರಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ಅಂಬೇಡ್ಕರ್‍ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ವೃತ್ತದ ಬಳಿ ರೈತರು ಕೆಲ ಕಾಲ ಮಾನವ ಸರಪಣಿ ನಿರ್ಮಿಸಿದರು.
ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಸಿ.ಶಂಕರಪ್ಪ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಾಪೆರ್Çರೇಟ್ ಸಂಸ್ಥೆಗಳ ಪರವಾಗಿ ನಿಂತಿದ್ದು, ಅಂಬಾನಿ ಹಾಗೂ ಅದಾನಿಯಂತ ಕುಳಗಳಿಗೆ ಮೋದಿ ಸರ್ಕಾರ ಅನುಕೂಲ ಮಾಡಿಕೊಡುತ್ತಿದೆ. ಇಂತಹ ಕಾಯ್ದೆಗಳನ್ನು ತಕ್ಷಣ ವಾಪಾಸ್ ಪಡೆಯದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ಮಲ್ಲಿಕಾರ್ಜುನಯ್ಯ ಮಾತನಾಡಿ, ಸರ್ಕಾರ ಜಾರಿಗೊಳಿಸಿರುವ ಎಪಿಎಂಸಿ ಕಾಯ್ದೆಯಿಂದ ರೈತ ಉತ್ಪನ್ನಗಳಿಗೆ ಬೆಲೆ ಸಿಗದೆ ಸಾಕಷ್ಟು ತೊಂದರೆ ಎದುರಾಗುತ್ತದೆ. ಆದ್ದರಿಂದ ಸರ್ಕಾರಗಳು ಈ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.
ಡಿಎಸ್‍ಎಸ್ ಜಿಲ್ಲಾ ಸಂಘಟನಾ ಸಂಚಾಲಕ ಕಣಿಮಯ್ಯ ಮಾತನಾಡಿ, ಬಡ ಕಾರ್ಮಿಕ ಹಾಗೂ ರೈತರ ವಿರುದ್ದ ನಿಲ್ಲಲು ಹೊರಟಿರುವ ಈ ಸರ್ಕಾರಕ್ಕೆ ಮುಂದಿನ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದರು.ಜಿ.ಪಂ.ಸದಸ್ಯ ಚೌಡಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ನಾಗೇಶ್ ಬಾಬು, ರೈತ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ದೊಡ್ಡಮಾಳಯ್ಯ, ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕ ಹಂದ್ರಾಳು ನಾಗಭೂಷಣ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ನಾಗರತ್ನಮ್ಮ, ವಕೀಲರ ಸಂಘದ ಅಧ್ಯಕ್ಷ ಪಿ.ಸಿ.ಕೃಷ್ಣಾರೆಡ್ಡಿ, ತಾಲ್ಲೂಕು ಅಧ್ಯಕ್ಷೆ ಭಾಗ್ಯಮ್ಮ, ತಾಲ್ಲೂಕು ಅಧ್ಯಕ್ಷ ಡಿ.ಆರ್.ರಾಜಶೇಖರ್, ಬೇಡತ್ತೂರು ನಾಗರಾಜು, ಚಿನ್ನಪ್ಪರೆಡ್ಡಿ, ಎಂ.ಡಿ.ಚಿಕ್ಕಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಆರ್.ರಾಜಗೋಪಾಲ್, ಪುರಸಭೆ ಮಾಜಿ ಅಧ್ಯಕ್ಷ ಎಂ.ಕೆ.ನಂಜುಂಡಯ್ಯ, ತಾಪಂ ಸದಸ್ಯ ಸೊಸೈಟಿ ರಾಮಣ್ಣ, ಡಿಸಿಸಿ ಬ್ಯಾಂಕ್‍ನ ಮಾಜಿ ನಿರ್ದೇಶಕ ಹೆಚ್.ಟಿ.ತಿಮ್ಮರಾಜು, ಸಿಐಟಿಯುನ ಕಮಲ, ಪಾರ್ವತಮ್ಮ, ನರಸಿಂಹಮೂರ್ತಿ, ಜೀವಿಕ ಸಂಘಟನೆಯ ಮಂಜುನಾಥ್, ಕರವೇ ಅಧ್ಯಕ್ಷ ಚಿಕ್ಕಮಾಲೂರು ಶಿವಕುಮಾರ್, ಕಟ್ಟಡ ಕಾರ್ಮಿಕರ ಸಂಘದ ತಾಲ್ಲೂಕು ಅಧ್ಯಕ್ಷ ಬೆಟ್ಟಪ್ಪ, ಬೀದಿ ಬದಿ ವ್ಯಾಪಾರಿಗಳ ಸಂಘದ ಗುರುರಾಜ್, ಚಿಕ್ಕರಂಗಯ್ಯ, ಡಿಎಸ್‍ಎಸ್ ಸಂಚಾಲಕ ಎಸ್.ಸಂಜೀವಯ್ಯ, ಹೊಸಕರೆ ವಿಎಸ್‍ಎಸ್‍ಎನ್ ಅಧ್ಯಕ್ಷರಾದ, ಮಂಜುನಾಥ್, ಸಿದ್ದಾಪುರ ವೀರಣ್ಣ, ಲೋಕೇಶ್, ಗಂಗರಾಜು ಹಾಗೂ ರೈತರು, ಮುಖಂಡರು ಇತರರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
