ದಾವಣಗೆರೆ
ಮಹಾನಗರ ಪಾಲಿಕೆ ವತಿಯಿಂದ 2019ರ ಸಾರ್ವತ್ರಿಕ ಚುನಾವಣಾ ನಿಮಿತ್ತ ಮತದಾರರು ತಮ್ಮ ಹಕ್ಕು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ಗಟ್ಟಿಗೊಳಿಸಬೇಕು ಎಂದು ಮಹಿಳಾ ಸ್ವ-ಸಹಾಯ ಸಂಘಗಳ ಮಹಿಳೆಯರ ಮೂಲಕ “ಜಾಗೃತಿ ಅಭಿಯಾನ” ಜಾಥಾ ಕಾರ್ಯಕ್ರವನ್ನು ಕೈಗೊಳ್ಳಲಾಯಿತು.
ನಿಟ್ಟುವಳ್ಳಿ ಹೊಸ ಬಡಾವಣೆ ಪ್ರದೇಶದಲ್ಲಿ ಈ ಕಾರ್ಯಕ್ರಮ ಕೈಗೊಂಡಿದ್ದು, ಈ ಜಾಥಾ ಕಾರ್ಯಕ್ರಮದಲ್ಲಿ ಏಪ್ರಿಲ್ 23 ರಂದು ಮತ ಚಲಾಯಿಸುತ್ತೇವೆಂದು ಪ್ರಮಾಣಿಕರಿಸಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಹಾನಗರಪಾಲಿಕೆ ಬಡತನ ನಿರ್ಮೂಲನ ಕೋಶದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು, ಸ್ವ-ಸಹಾಯ ಸಂಘದ ಮಹಿಳೆಯರಿಗೆ ಮತ ಚಲಾಯಿಸುವ ಬಗ್ಗೆ ಅರಿವು ಮೂಡಿಸಲಾಯಿತು ಎಂದು ಮಹಾನಗರ ಪಾಲಿಕಯ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








