ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ

ಜಗಳೂರು :

      ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪ್ರಸುತ್ತ ಪಡಿಸುತ್ತಿರುವ ಗಾಂಧಿಯವರ ಜೀವನ ಸಾಧನೆಯ ವಿವಿಧ ಘಟ್ಟಗಳನ್ನು ಗುರುತಿಸುವ ವಿನೂತನ ಗಾಂಧಿ ಸ್ಥಬ್ದ ಚಿತ್ರ ವಾಹನವು ಇಂದು ಮಧ್ಯಾಹ್ನ 2 ಗಂಟೆಗೆ ಚಿತ್ರದುರ್ಗದ ಮುಖಾಂತರ ಜಗಳೂರಿಗೆ ಆಗಮಿಸಿದ್ದು ಜನಪ್ರತಿನಿಧಿಗಳು, ಅಧಿಕಾರಿಗಳು, ಗಾಂಧಿ ಅನುಯಾಯಿಗಳು ಅದ್ದೂರಿಯಾಗಿ ಸ್ವಾಗತಿಸಿದರು.

     ತಾಲೂಕು ಪಂಚಾಯ್ತಿ ಅಧ್ಯಕ್ಷೆ ಮಂಜುಳಾ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ಆನಂದಪ್ಪ, ವೀರಶೈವ ಮಹಾಸಭಾದ ಅಧ್ಯಕ್ಷ ಶಿವನಗೌಡ, ತಾಲೂಕು ರೈತ ಸಂಘದ ಅಧ್ಯಕ್ಷ ಅಣಬೂರು ಮಠದ ಕೊಟ್ರೇಶ್, ಎಂ.ಎಸ್.ಪಾಟೀಲ್, ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯರಾದ ಜಯಲಕ್ಷ್ಮೀಮಹೇಶ್, ಕೆ.ಪಿ.ಪಾಲಯ್ಯ, ತಾಲೂಕು ಪಂಚಾಯ್ತಿ ಸದಸ್ಯ ಕುಬೇಂದ್ರಪ್ಪ, ಬಿಜೆಪಿ ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ಪದ್ಮಾಆನಂದಪ್ಪ, ಗ್ಯಾಸ್ ಓಬಣ್ಣ, ರೇವಣ್ಣನಾಯ್ಕ, ಎಐಎಸ್‍ಎಫ್ ರಾಜ್ಯ ಸಹಕಾರ್ಯದರ್ಶಿ, ವಾರ್ತಾ ಇಲಾಖೆಯ ಹಿರಿಯ ನಿರ್ದೇಶಕ ಅಶೋಕ್‍ಕುಮಾರ್, ಸೇರಿದಂತೆ ಮತ್ತಿತರರು ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link