ಕೂಡ್ಲಿಗಿ:
ಪಟ್ಟಣ ಪಂಚಾಯ್ತಿ ಕಾರ್ಯಾಲಯದ ಅವರಣದಲ್ಲಿ ಮಂಗಳವಾರ ಮಹಾತ್ಮ ಗಾಂಧೀಜಿ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ 150ನೇ ಜಯಂತಿ ಆಚರಣೆ ಮಾಡಲಾಯಿತು
ಪಟ್ಟಣ ಪಂಚಾಯ್ತಿ ಅಧ್ಯಕ್ಷ ಪಿ. ರಜನಿಕಾಂತ್ ಮಾತನಾಡಿ, ಗಾಂಧಿಜಿಯವರು ಭಾರತದ ಸ್ವತಂತ್ರ್ಯಕ್ಕಾಗಿ ಅಹಿಂಸೆ ಮತ್ತು ಸತ್ಯಗ್ರಹದ ಮೂಲಕ ಹೊರಾಟ ಮಾಡಿದರು. ಶಾಂತಿಯೇ ಅವರ ಮೂಲ ಮಂತ್ರವಾಗಿದ್ದು, ಗ್ರಾಮ ವಿಕಾಸದ ಬಗ್ಗೆ ಕನಸು ಕಂಡಿದ್ದರು. ಅವರ ಆದರ್ಶಗಳನ್ನು ಪಾಲನೆ ಮಾಡುವ ಮೂಲಕ ನಾವು ಅವರಿಗೆ ಗೌರವ ಸಲ್ಲಿಸಬೇಕಾಗಿದೆ ಎಂದರು.
ಸದಸ್ಯ ಎಸ್. ದುರುಗೇಶ, ಮುಖ್ಯಾಧಿಕಾರಿ ಉಮೇಶ್ ಹಿರೇಮಠ್ ಮಾತನಾಡಿದರು. ಉಪಾಧ್ಯಕ್ಷೆ ಕೋಲೆ ಮೈಮುನಾ, ಸ್ಥಾಯಿ ಸಮಿತಿ ಅಧ್ಯಕ್ಷ ಜಿ. ರಾಘವೇಂದ್ರ ಹಾಗೂ ಸದಸ್ಯರು, ಸಿಬ್ಬಂದಿ ಇದ್ದರು.
ನಂತರ ಸ್ವಚ್ಚತಾ ಹಿ ಸೇವಾ ಕಾರ್ಯಕ್ರಮದ ನಿಮಿತ್ತ ಪಟ್ಟಣ ಪಂಚಾಯ್ತಿ ಸದಸ್ಯರು, ಸಿಬ್ಬಂದಿ ಹಾಗೂ ಬೀದಿ ಬದಿ ವ್ಯಾಪಾರಿಗಳು ಸೇರಿ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಮಹಾತ್ಮ ಗಾಂಧಿ ಚಿತಾಭಸ್ಮವಿರುವ ಹುತಾತ್ಮರ ಸ್ಮಾರಕದವರಗೆ ಸ್ವಚ್ಚತಾ ಕಾರ್ಯ ಕೈಗೊಂಡರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
