ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ : ಸಿಇಓ

ತುಮಕೂರು
 
     ಆರೋಗ್ಯದ ಹಿತದೃಷ್ಟಿಯಿಂದ ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭ ಕಲ್ಯಾಣ್ ಅವರು ತಿಳಿಸಿದರು. 
   ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ನಗರದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿಂದು ಹಮ್ಮಿಕೊಂಡಿರುವ ಎರಡು ದಿನಗಳ ಕುಡಿಯುವ ನೀರು ಮತ್ತು ನೈರ್ಮಲ್ಯ ಹಾಗೂ ಆರೋಗ್ಯ ಕಾರ್ಯಕ್ರಮಗಳ ಕುರಿತ ಜನಜಾಗೃತಿ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
    ಈ ವಸ್ತುಪ್ರದರ್ಶನದಲ್ಲಿ ಸರ್ಕಾರದ ವಿವಿಧ ಯೋಜನೆಗಳು ಹಾಗೂ ಆರೋಗ್ಯ ಸೇವೆಗಳ ಕುರಿತು ಉಪಯುಕ್ತ ಮಾಹಿತಿ ತಿಳಿಸುವ ಫಲಕಗಳನ್ನು ಪ್ರದರ್ಶಿಸಲಾಗಿದ್ದು, ಸಾರ್ವಜನಿಕರಿಗೆ ಸ್ವಚ್ಛತೆ ಮತ್ತು ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ಇದಾಗಿದೆ ಎಂದು ಅವರು ತಿಳಿಸಿದರು.
   ಪ್ರಧಾನಮಂತ್ರಿಗಳ ಆಶಯದಂತೆ ಬರುವ ಒಂದು ವರ್ಷದೊಳಗಾಗಿ ಪ್ಲಾಸ್ಟಿಕ್ ನಿಷೇಧ ಮಾಡುವ ನಿಯಮಗಳನ್ನು ಜಾರಿಗೆ ತರಬೇಕು. ಪ್ಲಾಸ್ಟಿಕ್ ನಿಷೇಧದಿಂದ ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡಬಹುದಾಗಿದೆ. ಪ್ಲಾಸ್ಟಿಕ್ ಮುಕ್ತ ದೇಶವನ್ನಾಗಿ ಮಾಡಲು ಪ್ರತಿಯೊಬ್ಬರೂ ಸಹಕರಿಸಬೇಕು ಎಂದರಲ್ಲದೇ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶೌಚಾಲಯ ಬಳಕೆ ಮಾಡುವ ಬಗ್ಗೆ ಪ್ರತಿಯೊಬ್ಬರಿಗೂ ಅರಿವು ಮೂಡಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
    ಪ್ರದರ್ಶನದಲ್ಲಿ ಮಕ್ಕಳಿಗೆ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ, ನೀರು ಉಳಿಸಿ-ಹಸಿರು ಬೆಳೆಸಿ, ಜನನಿ-ಶಿಶು ಸುರಕ್ಷಾ ಕಾರ್ಯಕ್ರಮ, ಹಸಿಕಸ-ಒಣಕಸ ವಿಂಗಡಣೆ  ಸೇರಿದಂತೆ ಹಲವಾರು ಸ್ವಚ್ಛತೆ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ಜಾಗೃತಿ ಫಲಕಗಳನ್ನು ಪ್ರದರ್ಶಿಸಲಾಗಿದೆ.ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಡಿ. ಮಂಜುನಾಥ, ಜಿಲ್ಲಾ ಆರೋಗ್ಯಾಧಿಕಾರಿ ಡಾ|| ಚಂದ್ರಿಕಾ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ವೀರಭದ್ರಯ್ಯ, ಕೆಎಸ್‍ಆರ್‍ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಎ.ಎನ್. ಗಜೇಂದ್ರ ಕುಮಾರ್, ಮತ್ತಿತರರು ಉಪಸ್ಥಿತರಿದ್ದರು. 
.   
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap