ಮಧುಗಿರಿ
ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ ಎಂದು ತಾಲ್ಲೂಕು ಆಡಳಿತ ವೈದ್ಯಾಧಿಕಾರಿ ರಮೇಶ್ ಬಾಬು ತಿಳಿಸಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶುಕ್ರವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪುರಸಭೆ ಹಾಗೂ ಇತರೆ ಸಂಘಸಂಸ್ಥೆಗಳ ವತಿಯಿಂದ ಹಮ್ಮಿಕೊಂಡಿದ್ದ ಸ್ವಚ್ಛ ಭಾರತ್ ಆಂದೋಲನ ಹಾಗೂ ಕಾಯಕಲ್ಪ ಅರಿವು ಮತ್ತು ವಾಷ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿ ಅವರ ಸ್ವಚ್ಛ ಭಾರತದ ಕನಸನ್ನು ನಾವೆಲ್ಲರೂ ನನಸು ಮಾಡಲು ಪಣತೊಡಬೇಕು.
ರೋಗಗಳನ್ನು ಗುಣಪಡಿಸುವುದಕ್ಕಿಂತ ರೋಗ ಬಾರದಂತೆ ಮುನ್ನೆಚ್ಚರಿಕೆ ವಹಿಸುವುದು ಉತ್ತಮ. ರೋಗಗಳನ್ನು ತಡೆಗಟ್ಟಲು ಸ್ವಚ್ಛತೆಗೆ ಮೊದಲ ಆದ್ಯತೆಯನ್ನು ನಾವೆಲ್ಲರೂ ನೀಡಬೇಕು. ಸ್ವಚ್ಛತೆಯ ಬಗ್ಗೆ ಯುವಕರು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಸ್ವಚ್ಛತೆಯನ್ನು ಕಾಪಾಡುವ ಕುರಿತು ಪ್ರತಿಜ್ಞಾ ಬೋಧನೆ ಮಾಡಲಾಯಿತು. ನಂತರ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಖಾಸಗಿ ಬಸ್ಟಾಂಡ್‍ವರೆಗೂ ಜಾಥಾ ನಡೆಸಿ ಮಾನವ ಸರಪಳಿ ನಿರ್ಮಿಸಿ ಸ್ವಚ್ಛತೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿದರು.
ಆರೋಗ್ಯ ಇಲಾಖೆಯ ಆಡಳಿತ ವೈದ್ಯಾಧಿಕಾರಿ ಡಾ.ಗಂಗಾಧರ್, ವೈದ್ಯರಾದ ರತ್ನಾವತಿ, ಲೋಕೇಶ್ ರೆಡ್ಡಿ, ರೆಹಮಾನ್, ಪುರಸಭೆ ಆರೋಗ್ಯ ನಿರೀಕ್ಷಕ ಉಮೇಶ್, ಬಿ.ಎಚ್.ಇ ಧರಣೀಶ್ ಗೌಡ, ಪೊಲೀಸ್ ಇಲಾಖೆಯ ರಾಮಾಂಜನೇಯ, ಜಯ ಕರ್ನಾಟಕ ಸಂಘಟನೆಯ ಚಂದನ್, ತಿಮ್ಮರಾಜು, ಚಿಕ್ಕ ಕಾಮಯ್ಯ, ವಿದ್ಯಾರ್ಥಿಗಳು ಆಸ್ಪತ್ರೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಹಾಜರಿದ್ದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








