ಬೆಂಗಳೂರು
ಗಂಗಾ ಕಲ್ಯಾಣ ಯೋಜನೆಯಲ್ಲಿ ನಡೆದ ಅಕ್ರಮ ತನಿಖೆಗೆ ಸರ್ಕಾರ ಸದನ ಸಮಿತಿ ರಚಿಸಬೇಕು ಎಂದು ಮೇಲ್ಮನೆ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಪುನರ್ ಆಗ್ರಹಿಸಿದ್ದಾರೆ.ವಿಧಾನಸೌಧದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಂಗಾ ಕಲ್ಯಾಣ ಯೋಜನೆ ಅಕ್ರಮಗಳ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಧರಣಿ ನಡೆಸಿ, ಸದನ ಸಮಿತಿ ರಚಿಸುವಂತೆ ಒತ್ತಾಯಿಸಿದ್ದರೂ ಸರ್ಕಾರ ಈ ಬಗ್ಗೆ ಇನ್ನೂ ಕ್ರಮಕೈಗೊಂಡಿಲ್ಲ. ಆದಷ್ಟುಬೇಗ ಅಕ್ರಮ ಪತ್ತೆಹಚ್ಚಲು ಸದನ ಸಮಿತಿ ರಚಿಸಬೇಕೆಂದು ಒತ್ತಾಯಿಸಿದರು.
ಮೇಲ್ಮನೆ ಸದಸ್ಯ ಎಂ.ಕೆ.ಪ್ರಾಣೇಶ್ ಮಾತನಾಡಿ, ಅಧಿಕಾರಿಗಳು ಲಂಚ ಪಡೆದು ಕೊಳವೆ ಬಾವಿ ಕೊರೆಸಿದ್ದಾರೆ. ಕೆಳಹಂತ ಅಧಿಕಾರಿಗಳಿಂದ ಹಿಡಿದು ಮೇಲಿನ ಹಂತದ ಅಧಿಕಾರಿಗಳವರೆಗೆ ಲಂಚ ಪಡೆದುಕೊಳ್ಳುತ್ತಿದ್ದಾರೆ. ಯೋಜನೆಯಲ್ಲಿ ಅಕ್ರಮ ನಡೆದರೂ ಸರ್ಕಾರ ಕಣ್ಮುಚ್ಚಿ ಕುಳಿತು, ಭ್ರಷ್ಟಾಚಾರವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








