ವಾಸ್ತವ್ಯಹೂಡಿ ಸಂತ್ರಸ್ತರ ಸಮಸ್ಯೆ ಆಲಿಸಿ : ಹೆಚ್ ವಿಶ್ವನಾಥ್

ಬೆಂಗಳೂರು

    ನೆರೆಪೀಡಿತ ಪ್ರದೇಶಗಳಲ್ಲಿ ಸಚಿವರು, ಶಾಸಕರು ವಾಸ್ತವ್ಯ ಹೂಡುವ ಮೂಲಕ ಅಲ್ಲಿನ ಜನರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸವನ್ನು ಮಾಡಬೇಕೆಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್ ಸಲಹೆ ಮಾಡಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹದಿಂದ ಮನೆ ಕಳೆದುಕೊಂಡ ಜನರು ಶಾಲೆ, ಕಲ್ಯಾಣ ಮಂಟಪ ಮತ್ತಿತರ ಕಡೆಗಳಲ್ಲಿ ಉಳಿದುಕೊಂಡಿದ್ದಾರೆ. ಅಂತಹ ಕಡೆಗಳಲ್ಲಿ ಸಚಿವರು, ಶಾಸಕರು ಒಂದೆರಡು ದಿನ ವಾಸ್ತವ್ಯ ಹೂಡಿ ಪರಿಹಾರ ಕಾರ್ಯದ ಪರಿಶೀಲನೆ ಮಾಡುವುದು ಸೂಕ್ತ ಎಂದು ಅವರು ತಿಳಿಸಿದರು.

    ಕೇಂದ್ರ ಸರ್ಕಾರ ಮೊದಲ ಕಂತಿನಲ್ಲಿ ನೆರೆ ಪರಿಹಾರ ಧನವನ್ನು ಬಿಡುಗಡೆ ಮಾಡಿತ್ತು. ಮುಂದಿನ ದಿನಗಳಲ್ಲಿ ಮತ್ತಷ್ಟು ನೆರವನ್ನು ನೀಡಲಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಬ್ಲಿಕ್ ಪರೀಕ್ಷೆ ಉತ್ತಮ:

  7ನೇ ತರಗತಿಗೂ ಪಬ್ಲಿಕ್ ಪರೀಕ್ಷೆ ನಡೆಸುವುದು ಉತ್ತಮ ಎಂದ ಅವರು, ಈ ರೀತಿ ನಡೆಸುವುದರಿಂದ ವಿದ್ಯಾರ್ಥಿಗಳ ಶಿಕ್ಷಣದ ಗುಣಮಟ್ಟ ಉತ್ತಮಗೊಳ್ಳಲು ಸಹಕಾರಿಯಾಗಿದೆ ಎಂದು ವಿಶ್ವನಾಥ್ ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link