ಕೊಳಗಲ್ಲು ಗ್ರಾಮದಲ್ಲಿ ಮಕ್ಕಳ ಗ್ರಾಮ ಸಭೆ

ಬಳ್ಳಾರಿ

       ಕೊಳಗಲ್ಲು ಗ್ರಾಮಪಂಚಾಯಿತಿ ವತಿಯಿಂದ ಕೊಳಗಲ್ಲು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮ ಶಾಲೆಯ ಆವರಣದಲ್ಲಿ ಶನಿವಾರ ಮಕ್ಕಳ ಗ್ರಾಮ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.

          ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಸ್.ಬಿ.ಹಂದ್ರಾಳ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

       2006 ರಿಂದ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಮಕ್ಕಳ ಗ್ರಾಮಸಭೆಯನ್ನು ನಡೆಸಲು ಸರ್ಕಾರದ ಆದೇಶವಿದ್ದು, ಕಡ್ಡಾಯವಾಗಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಮಕ್ಕಳಿಗೋಸ್ಕರ ಗ್ರಾಮ ಸಭೆಗಳನ್ನು ನಡೆಸುತ್ತಿಲ್ಲ ಇದು ಬೇಸರದ ವಿಷಯ, ಮಕ್ಕಳ ಗ್ರಾಮ ಸಭೆಗಳನ್ನು ನಡೆಸುವುದರಿಂದ ಮಕ್ಕಳಲ್ಲಿರುವ ಸಮಸ್ಯೆಗಳನ್ನು ಹೇಳಿಕೊಳ್ಳುವುದರ ಮುಖಾಂತರ ಬಗೆಹರಿಸಬಹುದಾಗಿದೆ. ಅದಕ್ಕೆ ಗ್ರಾಮ ಪಂಚಾಯಿತಿ ಹಾಗೂ ಶಿಕ್ಷಣ ಇಲಾಖೆಯು ಮುತು ವರ್ಜಿವಹಿಸಿ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು ಹಾಗೂ ಬಾಲಕೀಯರಿಗಾಗಿಯೇ ಪ್ರತ್ಯೇಕ ಗ್ರಾಮ ಸಭೆಗಳನ್ನು ನಡೆಸಬೇಕೆಂದು ಅವರು ಹೇಳಿದರು.

        ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರಾದ ಎ.ಮೌನೇಶ್ ಅವರು ಮಾತನಾಡಿ ಮಕ್ಕಳ ಗ್ರಾಮ ಸಭೆಗಳಲ್ಲಿ ಕಡ್ಡಾಯವಾಗಿ ಶಾಲೆಯ ಎಲ್ಲಾ ಮಕ್ಕಳು ಭಾಗವಹಿಸಿ ತಮ್ಮಲ್ಲಿರುವ ಮೂಲಭೂತ ಸೌಕರ್ಯಗಳು ಹಾಗೂ ತಮಗಿರುವ ಯಾವುದೇ ಸಮಸ್ಯೆಗಳನ್ನು ಮಕ್ಕಳ ಗ್ರಾಮ ಸಭೆಯಲ್ಲಿ ಸಲ್ಲಿಸಬೇಕು. ಇದರಿಂದ ಆಯಾ ಇಲಾಖೆ ಅಧಿಕಾರಿಗಳು ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗುತ್ತದೆ. ಮಕ್ಕಳ ನಿರಂತರ ಶೈಕ್ಷಣಿಕ ಮುಂದುವರೆಕೆಗೆ ಸಹಾಯವಾಗುತ್ತದೆ ಎಂದರು.

      ಮಕ್ಕಳ ಪ್ರತಿನಿಧಿಗಳಾಗಿ ವೇದಿಕೆಯಲ್ಲಿ ಮಕ್ಕಳು ಭಾಗವಹಿಸಿ ತಮಗೆ ಹಾಗೂ ಶಾಲೆಯಲ್ಲಿರುವ ಬೇಡಿಕೆಗಳನ್ನು ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಗ್ರಾ ಪಂ ಅಧ್ಯಕ್ಷರಾದ ಹುಲೆಪ್ಪ, ತಾಪಂ ಸದಸ್ಯ ಬೋಗರಾಜು ಸೇರಿದಂತೆ ಇತರರು ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap