ಚಿತ್ರದುರ್ಗ :
ಅನಾಥ, ಪರಿತ್ಯಕ್ತ ಮತ್ತು ಒಪ್ಪಿಸಲ್ಪಟ್ಟ ಹಾಗು ಬೇಡವಾಡ ಮಕ್ಕಳನ್ನು ಪೋಷಕರು ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಆಸ್ಪತ್ರೆ ಹಾಗು ಕಸದ ತೊಟ್ಟಿಯಲ್ಲಿ ಬಿಟ್ಟು ಹೋಗಿರುವ ಪ್ರಕರಣಗಳು ಹೆಚ್ಚಾಗಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ವತಿಯಿಂದ ಶ್ರೀ ಮುರುಘಾಮಠದ ಆವರಣದಲ್ಲಿ ‘ಮಮತೆಯ ತೊಟ್ಟಿಲ’ನ್ನು ಇಂದು ಬೆಳಗ್ಗೆ ಡಾ. ಶಿವಮೂರ್ತಿ ಮುರುಘಾ ಶರಣರು ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಇಲಾಖೆಯ ಉಪನಿರ್ದೇಶಕಿ ರಾಧಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವೈಶಾಲಿ ಜೆ. ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೆಂಕಟಲಕ್ಷ್ಮಿ, ಚಂದ್ರಪ್ಪ, ಡಾ. ಪ್ರಭಾಕರ್, ಎಸ್‍ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ.ಪರಮಶಿವಯ್ಯ, ಕಾರ್ಯನಿರ್ವಹಣಾಧಿಕಾರಿ ಎಂ.ಜಿ.ದೊರೆಸ್ವಾಮಿ, ಜಗದೀಶ್ ಮುಂತಾದವರಿದ್ದರು.