ಬೆಂಗಳೂರು
ವೆಲ್ಡಿಂಗ್ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ತಗುಲಿ ಯುವಕನೊಬ್ಬ ಮೃತಪಟ್ಟಿರುವ ದುರ್ಘಟನೆ ಜಾಲಹಳ್ಳಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಇಸ್ರೋ ಕ್ವಾರ್ಟಸ್ ಬಳಿ ನಡೆದಿದೆ.
ಬನಶಂಕರಿ ಸೈಯದ್ ನಾಸಿರ್ (18)ಎಂದು ಮೃತಪಟ್ಟ ಯುವಕನನ್ನು ಗುರುತಿಸಲಾಗಿದೆ.ಇಸ್ರೋ ಕ್ವಾರ್ಟಸ್‍ನ ಮನೆಯೊಂದರ ವೆಲ್ಡಿಂಗ್ ಕೆಲಸಕ್ಕೆ ನಿನ್ನೆ ನಾಸಿರ್ ಬಂದಿದ್ದು, ಸಂಜೆ 6ರ ವೇಳೆ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ತಗುಲಿ ಕುಸಿದು ಬಿದ್ದಿದ್ದಾನೆ.
ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಜಾಲಹಳ್ಳಿ ಪೆÇಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ಡಿಸಿಪಿ ಶಶಿಕುಮಾರ್ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








