ಬೆಂಗಳೂರು
ಸ್ಕೂಟರ್‍ನಲ್ಲಿ ಹೋಗುತ್ತಿದ್ದವರ ಮೇಲೆ ದಿಢೀರ್ ಮರ ಬಿದ್ದು ಪಿಯುಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟು ಹಿಂಬದಿ ಕುಳಿತಿದ್ದ ಆತನ ಸ್ನೇಹಿತ ಗಾಯಗೊಂಡಿರುವ ದುರ್ಘಟನೆ ಕುಮಾರಸ್ವಾಮಿ ಲೇ ಔಟ್ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಇಲಿಯಾಸ್ ನಗರದ ಮಹ್ಮದ್ ಉಮೈರ್ (17)ಎಂದು ಗುರುತಿಸಲಾಗಿದೆ ಗಾಯಗೊಂಡಿರುವ ಹಿಂಬದಿ ಸವಾರ ಉಮೈದ್ ಪಾಷ(17) ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾನೆ.
ದಯಾನಂದ ಸಾಗರ್ ಕಾಲೇಜಿನಲ್ಲಿ ಮೊದಲ ವರ್ಷದ ಪಿಯುಸಿ ಓದುತ್ತಿದ್ದ ಮಹ್ಮದ್ ಉಮೈದ್ ಸ್ನೇಹಿತ ಉಮೈದ್ ಪಾಷ ಜೊತೆ ರಾತ್ರಿ 10ರ ವೇಳೆ ಕುಮಾರಸ್ವಾಮಿ ಲೇಔಟ್‍ನ ದೇವೇಗೌಡ ಪೆಟ್ರೋಲ್ ಬಂಕ್ ಕಡೆಯಿಂದ ಇಲಿಯಾಸ್ ನಗರದ ಮನೆಗೆ ಹೊಂಡಾ ಸ್ಕೂಟರ್‍ನಲ್ಲಿ ಹೋಗುತ್ತಿದ್ದರು.
ಮಾರ್ಗ ಮಧ್ಯೆ ಕದಿರೇನಹಳ್ಳಿ ಕ್ರಾಸ್ ಬಳಿ ದಿಢೀರನೆ ಮರ ಸ್ಕೂಟರ್ ಬಿದ್ದಿದ್ದು ಸವಾರ ಉಮೈದ್ ಪಾಷ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಹಿಂಬದಿ ಸವಾರ ಉಮೈದ್ ಪಾಷ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಯಾವುದೇ ಆಪಾಯವಿಲ್ಲದೇ ಪಾರಾಗಿದ್ದಾರೆ
ಸುದ್ಧಿ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ಕುಮಾರಸ್ವಾಮಿ ಲೇ ಔಟ್ ಪೊಲೀಸರು ಧಾವಿಸಿ ಪರಿಶೀಲಿಸಿ ಬಿದ್ದಿದ್ದ ಮರವನ್ನು ತೆರವು ಗೊಳಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ಡಿಸಿಪಿ ಅಣ್ಣಾಮಲೈ ತಿಳಿಸಿದ್ದಾರೆ.
ಮೇಯರ್ ಸಾಂತ್ವಾನ
ಮರದ ಬಿದ್ದು ಮೃತಪಟ್ಟ ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿದ ಮೇಯರ್ ಗಂಗಾಂಬಿಕೆರವರು ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳಿದರು.ಬಿಬಿಎಂಪಿಯಿಂದ ಮೃತ ವಿದ್ಯಾಥಿಯ ಕುಟುಂಬದ ಸದಸ್ಯರಿಗೆ ಪರಿಹಾರವನ್ನು ಅಧಿಕಾರಿಗಳೊಂದಿಗೆ ಚರ್ಚಿಸಿ ಪ್ರಕಟಿಸುವುದಾಗಿ ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
