ಮತ ಎಣಿಕೆಗೆ ಡಿಸಿ ಅಧ್ಯಕ್ಷತೆಯಲ್ಲಿ ಪೂರ್ವ ಸಿದ್ಧತಾ ಸಭೆ

ತುಮಕೂರು

       ಮುಂಬರುವ ಮೇ 23ರಂದು ನಡೆಯುವ ತುಮಕೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯವನ್ನು ಯಶಸ್ವಿಯಾಗಿ ನಡೆಸುವ ಸಂಬಂಧ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ: ರಾಕೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಪೂರ್ವ ಸಿದ್ಧತಾ ಸಭೆ ನಡೆಯಿತು.

        ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಮತ ಎಣಿಕೆಗೆ ಸಂಬಂಧಿಸಿದಂತೆ ಈಗಾಗಲೇ ಭಾರತ ಚುನಾವಣಾ ಆಯೋಗ ಸುತ್ತೋಲೆಗಳನ್ನು ಹೊರಡಿಸಿದ್ದು, ಸುತ್ತೋಲೆಗಳಲ್ಲಿರುವ ಮಾರ್ಗಸೂಚಿಗಳನ್ವಯ ಎಣಿಕೆ ಕಾರ್ಯವನ್ನು ನಡೆಸಬೇಕಿದೆ. ಈ ಹಿನ್ನಲೆಯಲ್ಲಿ ಸುತ್ತೋಲೆಗಳನ್ನು ಸಹಾಯಕ ಚುನಾವಣಾಧಿಕಾರಿಗಳು ಹಾಗೂ ತಹಶೀಲ್ದಾರ್‍ಗಳು ಚೆನ್ನಾಗಿ ಓದಿ ಮನನ ಮಾಡಿಕೊಳ್ಳಬೇಕು ಎಂದು ಅವರು ಸೂಚಿಸಿದರು.

       ಮತ ಎಣಿಕೆಯ ಸಂಬಂಧ ಸಹಾಯಕ ಚುನಾವಣಾಧಿಕಾರಿಗಳು, ತಹಶೀಲ್ದಾರ್‍ಗಳು ಹಾಗೂ ಕೌಂಟಿಂಗ್ ಸಿಬ್ಬಂದಿಗಳಿಗೆ 2 ಬಾರಿ ತರಬೇತಿಯನ್ನು ನೀಡಲಿದ್ದೇವೆ. ಮತ ಎಣಿಕೆಗೆ ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ಜಿಲ್ಲಾಧಿಕಾರಿಗಳ ಕಛೇರಿಯಿಂದ ಒದಗಿಸಲಾಗುವುದು. ಸಂಬಂಧಿಸಿದ ವಿಧಾನಸಭಾ ಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳಿಗೆ ಆಯಾ ಕ್ಷೇತ್ರಗಳ ಮತ ಎಣಿಕೆ ಕಾರ್ಯದ ಜವಾಬ್ದಾರಿಯಾರುತ್ತದೆ ಎಂದರು.

        ಸಭೆಯಲ್ಲಿ ಮಾತನಾಡಿದ ಅಪರ ಜಿಲ್ಲಾಧಿಕಾರಿಗಳು ಹಾಗೂ ಸಹಾಯಕ ಜಿಲ್ಲಾ ಚುನಾವಣಾಧಿಕಾರಿ ಕೆ. ಚನ್ನಬಸಪ್ಪ ಅವರು, ಪ್ರತಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆಗೆ 14 ಟೇಬಲ್‍ಗಳನ್ನು ಮಾಡಲು ಆಯೋಗದ ಸೂಚನೆ ಇದೆ. ಅದರಂತೆ ಪ್ರತಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆಗೆ 14 ಕೌಂಟಿಂಗ್ ಸೂಪರ್‍ವೈಸರ್, 14 ಕೌಂಟಿಂಗ್ ಅಸಿಸ್ಟೆಂಟ್ ಹಾಗೂ ಮೈಕ್ರೋ ಅಬ್ಸವರ್‍ಗಳನ್ನು ನೇಮಿಸಬೇಕಾಗಿದೆ.

        ಇವರಿಗೆಲ್ಲಾ ತರಬೇತಿಯನ್ನು ನೀಡಲಾಗುವುದು. ಮತ ಯಂತ್ರಗಳನ್ನು ಇಟ್ಟಿರುವ ಸ್ಟ್ರಾಂಗ್ ಕೊಠಡಿಯ ಪಕ್ಕದಲ್ಲಿಯೇ ಎಣಿಕೆ ಕೇಂದ್ರವನ್ನು ಮಾಡಲಾಗಿದೆ ಎಂದರು.

        ಮತ ಎಣಿಕೆ ಸಂಬಂಧ ಚುನಾವಣಾ ಆಯೋಗ ನೀಡಿರುವ ಸುತ್ತೋಲೆಗಳನ್ವಯ ಕಾರ್ಯ ನಿರ್ವಹಿಸಬೇಕಾಗಿದೆ ಹಾಗೂ ಎಣಿಕೆ ಸಮಯದಲ್ಲಿ ನಿರ್ವಹಿಸಬೇಕಾದ ಕ್ರಮಗಳು ಮತ್ತು ಮತ ಎಣಿಕೆಗೆ ಅಗತ್ಯವಿರುವ ಸಿದ್ಧತೆಗಳ ಬಗ್ಗೆ ಸಹಾಯಕ ಚುನಾವಣಾಧಿಕಾರಿಗಳಿಗೆ ತಹಶೀಲ್ದಾರ್‍ಗಳಿಗೆ ಹಾಗೂ ನೋಡೆಲ್ ಅಧಿಕಾರಿಗಳಿಗೆ ವಿವರಿಸಿದರು.

           ಸಭೆಯಲ್ಲಿ ತುಮಕೂರು ಉಪವಿಭಾಗಾಧಿಕಾರಿ ಶಿವಕುಮಾರ್, ತಿಪಟೂರು ವಿಭಾಗಾಧಿಕಾರಿ ಪೂವಿತಾ ಸೇರಿದಂತೆ ಸಹಾಯಕ ಚುನಾವಣಾಧಿಕಾರಿಗಳು, ತಹಶೀಲ್ದಾರರುಗಳು, ಕೌಂಟಿಂಗ್ ನೋಡೆಲ್ ಅಧಿಕಾರಿಗಳು ಭಾಗವಹಿಸಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap