ಮನೆ ಮನೆಗೆ ತೆರಳಿ ಮತದಾನ ಜಾಗೃತಿ ಮೂಡಿಸಿದ ಪಿ.ಆರ್.ಕೆ ಕಾಲೇಜಿನ ವಿದ್ಯಾರ್ಥಿಗಳು

ಬಳ್ಳಾರಿ

     ನಗರದ ಪಿ.ಆರ್.ಕೆ ಪದವಿ ಮಹಾವಿದ್ಯಾಲಯದ ಮತದಾರರ ಸಾಕ್ಷರತಾ ಕ್ಲಬ್ ವತಿಯಿಂದ ಕಾಲೇಜಿನ ವಿದ್ಯಾರ್ಥಿಗಳು ಮನೆ ಮನೆಗೆ ತೆರಳಿ ಕರಪತ್ರಗಳನ್ನು ವಿತರಿಸುವ ಮೂಲಕ ಮತದಾನದ ಪ್ರಾಮುಖ್ಯತೆ ಕುರಿತು ಜಾಗೃತಿ ಮೂಡಿಸಿದರು.ಮತದಾನ ಅಮೂಲ್ಯ, ತಪ್ಪದೇ ಮತಚಲಾಯಿಸಿ, ಮತದಾನ ಮಾಡದಿದ್ದರೆ ಸಂವಿಧಾನಕ್ಕೆ ದ್ರೋಹ ಬಗೆದಂತೆ ಎಂಬುದು ಸೇರಿದಂತೆ ಮತದಾನ ಪ್ರಾಮುಖ್ಯತೆ ಸಾರುವ ವಿವಿಧ ರೀತಿಯ ಘೋಷಣೆಗಳನ್ನು ಕೂಗುತ್ತಾ ಸಂಚರಿಸುತ್ತಾ ಮನೆ ಮನೆಗಳಿಗೆ ತೆರಳಿ ಕರಪತ್ರಗಳನ್ನು ವಿತರಿಸಿ ತಪ್ಪದೇ ವೋಟ್ ಮಾಡಿ ಎಂದು ಹೇಳುತ್ತಿದ್ದರು.ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಇದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link