ಜಿಲ್ಲಾ ಕಾರಾಗೃಹದಲ್ಲಿ ವಿವಿಪ್ಯಾಟ್ ಪ್ರಾತ್ಯಕ್ಷತೆ

ಹಾವೇರಿ

        ತಾಲೂಕ ಪಂಚಾಯತಿವತಿಯಿಂದ ಹಾವೇರಿ ಜಿಲ್ಲಾ ಕಾರಾಗೃಹದಲ್ಲಿ ಮಿಂಚಿನ ಮತದಾನ ಜಾಗೃತಿ ಜರುಗಿತು. ಈ ಸಂಧರ್ಭದಲ್ಲಿ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಯಾದ ಶ್ರೀಮತಿ ಅನ್ನಪೂರ್ಣ ಮುದುಕಮ್ಮನವರ ಮಾತನಾಡಿ ಮತದಾನ ಅತ್ಯಂತ ಪವಿತ್ರ ಹಕ್ಕು, ಪ್ರಜಾಪಭುತ್ವದ ಬಲವರ್ದನೆಗಾಗಿ ಎಲ್ಲಾರು ಕಡ್ಡಾಯವಾಗಿ ಮತದಾನ ಮಾಡಬೇಕು.

         ಹಾವೇರಿ ತಾಲೂಕಿನ ಆಲದಕಟ್ಟಿ ಗ್ರಾಮ ಪಂಚಾಯತಿಯ ಕೆರೆಮತ್ತಿಹಳ್ಳಿಯ ಜಿಲ್ಲಾ ಕಾರಾಗೃಹದಲ್ಲಿ ನಡೆದ ವಿವಿ ಪ್ಯಾಟ ಪ್ರಾತ್ಯಕ್ಷಿಕೆಯಲ್ಲಿ ವಿವಿಪ್ಯಾಟನ ಮೂಲಕ ಮತದಾರರು ಮತದಾನ ಮಾಡಿದ ಬಗ್ಗೆ ಖಾತರಿಪಡಿಸಿಕೊಳ್ಳಬಹುದು ಎಲ್ಲರು ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸುವದು ಪ್ರಜೆಗಳ ಕರ್ತವ್ಯವಾಗಿದೆ ಎಂದು ತಿಳಿಸಿದರು.

        ಇದೆ ವೇಳೆ ಅಣಕು ಮತದಾನದ ಮೂಲಕ ವಿವಿಪ್ಯಾಟನಲ್ಲಿ ಮತ ಖಾತರಿಯ ಪ್ರಾತ್ಯಕ್ಷಿಕೆ ನಡೆಸಲಾಯಿತು. ಜಿಲ್ಲಾ ಕಾರಾಗೃಹದ ಸಿಬ್ಬಂದಿ ವರ್ಗದವರಿಗೆ ಅಣಕು ಮತದಾನದಲ್ಲಿ ಫಾಲ್ಗೊಂಡು ಮಾಹಿತಿ ಪಡೆದರು. ಜಿಲ್ಲಾ ಕಾರಾಗೃಹದ ಅಧಿಕಾರಿಯಾದ ಶ್ರೀ ತಿಮ್ಮಣ್ಣ ಭಜಂತ್ರಿ ಯವರು ಮಾತನಾಡಿ ನಾವು ಮತದಾನ ಮಾಡುವುದಲ್ಲದೆ ನಮ್ಮ ಸುತ್ತಮುತ್ತಲಿನವರು ಮತದಾನ ಮಾಡುವಂತೆ ಪ್ರೇರೆಪಣೆ ನೀಡಬೇಕು ಮತ್ತು ಮತದಾನದಿಂದ ದೂರ ಉಳಿದವರಿಗೆ ಮತದಾನದ ಮಹತ್ವ ಕುರಿತು, ತಿಳಿಹೇಳುವ ಮೂಲಕ ಮತದಾನ ಮಾಡುವಂತೆ ಪ್ರೇರೆಪಿಸಬೇಕು ಎಂದು ತಿಳಿಹೇಳಿದರು.

         ಮುಂದುವರೆದು ತಾಲೂಕ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಶ್ರೀಮತಿ ಪುಷ್ಪಲತಾ ಬಿದರಿ ಮಾತನಾಡಿ ತಾಲೂಕ ವ್ಯಾಪ್ತಿಯಲ್ಲಿ ಮತದಾನ ಶೇಕಡಾ ಪ್ರಮಾಣ ಹೆಚ್ಚಿಸುವಲ್ಲಿ ಕಾಳಜಿವಹಿಸಬೇಕಿದೆ ಎಂದರು. ಕಾರ್ಯಕ್ರಮದಲ್ಲಿ ತಾಲೂಕ ಪಂಚಾಯತಿ ಸಿಬ್ಬಂದಿ ವರ್ಗದವರು, ಸೆಕ್ಟರ ಅಧಿಕಾರಿಳಾದ ಶ್ರೀ ಎಮ್ ಐ ಕಲ್ಲೊಳಕರ್ ಹಾಗೂ ಗ್ರಾಮ ಪಂಚಾಯತ ಆಲದಕಟ್ಟಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಎಸ್ ಎಸ್ ಎರೇಶಿಮಿ ಹಾಗೂ ಸಿಬ್ಬಂದಿ ವರ್ಗದವರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link