ಗಿರೀಶ ಶಿಕ್ಷಣ ಮಹಾವಿದ್ಯಾಲಯದ ಬಿ.ಇಡಿ ಪ್ರಶಿಕ್ಷಣಾರ್ಥಿಗಳಿಂದ ಮತದಾನ ಜಾಗೃತಿ ಜಾಥಾ

ಹಿರಿಯೂರು :

    ಸದೃಢ ಪ್ರಜಾಪ್ರಭುತ್ವ ವ್ಯವಸ್ಥೆ ನಿರ್ಮಾಣವಾಗಲು ಮತದಾರರು ಜಾಗೃತರಾಗಬೇಕು. ಪ್ರತಿಯೊಬ್ಬರೂ ತಪ್ಪದೇ ಮತಗಟ್ಟೆಗೆ ಹೋಗಿ ಮತ ಚಲಾಯಿಸುವ ಮೂಲಕ ನಾವೆಲ್ಲರೂ ದೇಶದ ಸಂವಿಧಾನದ ಆಶಯವನ್ನು ಎತ್ತಿ ಹಿಡಿಯೋಣ ಎಂಬುದಾಗಿ ಗಿರೀಶ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಎಂ.ಎ.ಸುಧಾ ಹೇಳಿದರು.

      ನಗರದಲ್ಲಿ ಗಿರೀಶ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

     ಈ ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ರವಿಕುಮಾರ್ ಮತ್ತು ಅಶೋಕ್ ವಿವಿ ಪ್ಯಾಟ್ ಮತ್ತು ಇವಿಎಂ ಪ್ರಾತ್ಯಕ್ಷಿಕೆ ನೀಡಿದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಮ್‍ಕುಮಾರ್, ಹಿರಿಯ ಉಪನ್ಯಾಸಕರಾದ ನಿಜಲಿಂಗಪ್ಪ, ರಘು, ಶಾಂತಮೂರ್ತಿ, ವೀರಣ್ಣ, ಲೋಕೇಶ್, ರಾಜೇಂದ್ರಪ್ರಸಾದ್, ವಿಜಯಶ್ರೀ, ನಾಗರಾಜ್, ನಯೀಮುದ್ದೀನ್ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link