ಹಿರಿಯೂರು:
ಮತದಾನದಲ್ಲಿ ಹೆಚ್ಚು ಜನರು ಭಾಗವಹಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸದೃಢಗೊಳಿಸುವ ಅಗತ್ಯವಿದೆ ಎಂದು ತೋಟಗಾರಿಕೆ ಹಿರಿಯ ನಿರ್ದೇಶಕ ಟಿ.ತೋಟಯ್ಯ ಹೇಳಿದರು.
ತೋಟಗಾರಿಕೆ ಇಲಾಖೆ ಮತ್ತು ಚುನಾವಣಾ ಸ್ವೀಪ್ ಸಮಿತಿ ಸಹಯೋಗದಲ್ಲಿ ಆಯೋಜಿಸಿದ್ದ ಮತದಾನ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.ಆಮಿಷಗಳಿಗೆ ಬಲಿಯಾಗದೇ ಅತ್ಯಂತ ವಿವೇಚನಾಯುಕ್ತವಾಗಿ ಯೋಗ್ಯ ವ್ಯಕ್ತಿಗೆ ತಪ್ಪದೇ ಮತ ಚಲಾಯಿಸಬೇಕು ಎಂದು ಕರೆ ನೀಡಿದರು.ತೋಟಗಾರಿಕೆ ಅಧಿಕಾರಿ ಜಯಂತ್, ವಾಣಿ, ಅಶ್ವಿನಿ, ಪೂಜಿತ, ಡಾ.ತಯೀಬ್, ತಿಪ್ಪೇಸ್ವಾಮಿ ಇತರರಿದ್ದರು.